ಅತ್ಯಾಚಾರ ಪ್ರಕರಣ ಖಂಡಿಸಿ, ಜಯ ಕರ್ನಾಟಕ ಪ್ರತಿಭಟನೆ.

ಧಾರವಾಡ.

ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣ ಖಂಡಿಸಿ,ಜಯ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ್ರು. ನಗರದ ಜಿಲ್ಲಾಧಿಕಾರಿ ಕಛೇರಿ ಎದುರು ಜಮಾಯಿಸಿದ ಜಯ ಕರ್ನಾಟಕ ಸಂಘಟನೆಕಾರರು ಅತ್ಯಾಚಾರ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ, ಅತ್ಯಾಚಾರಿಗಳ ವಿರುದ್ಧ ಧಿಕ್ಕಾರ ಕೋಗಿ ಆಕ್ರೋಶ ಹೊರಹಾಕಿದ್ರು. ಅಲ್ಲದೇ ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೆ ತರಬೇಕು ಇನ್ನೂ ಮಹಿಳಾ ಮತ್ತು ಮಕ್ಕಳ ಸುರಕ್ಷತಾ ಸಮಿತಿಗಳನ್ನು ರಚಿಸಿ ಸೂಕ್ತ ಭದ್ರತೆ ನೀಡಬೇಕು ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣ ನಡೆಯುವುದನ್ನು ತಡೆಯಬೇಕು ಎಂದು ಆಗ್ರಹಿಸಿದರು.