KCET 2021: ಆಗಸ್ಟ್ 28 ರಿಂದ 30ರವರೆಗೆ 530 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ

ಬೆಂಗಳೂರು, ಆಗಸ್ಟ್ 27: ಆಗಸ್ಟ್ 28 ರಿಂದ 30ರವರೆಗೆ ಒಟ್ಟು 530 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ. ಆ. 28ರಂದು ಜೀವವಿಜ್ಞಾನ ಮತ್ತು ಗಣಿತ, ಆ. 29ರಂದು ಭೌತವಿಜ್ಞಾನ ಮತ್ತು ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ. ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ರಾಜ್ಯದ ಆರು ಸ್ಥಳಗಳಲ್ಲಿ ಆ.30ರಂದು ಕನ್ನಡ ಪರೀಕ್ಷೆ ನಡೆಯಲಿದೆ ಎಂದರು.
ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, 1,682 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಸಚಿವರು ತಿಳಿಸಿದರು.
ಆಗಸ್ಟ್ 28 ಹಾಗೂ 29ರಂದು ಸಿಇಟಿ ಪರೀಕ್ಷೆ
ಈ ಕುರಿತು ಮಾಹಿತಿ ನೀಡಿರುವ ಅವರು, ರಾಜ್ಯಾದ್ಯಂತ ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿದ್ದು, ಕೋವಿಡ್ ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆ ನಡೆಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.
ಇನ್ನು ಪರೀಕ್ಷೆ ದಿನದಂದು ಗೃಹ ಇಲಾಖೆಯ ಸೂಕ್ತ ಪೊಲೀಸ್ ವ್ಯವಸ್ಥೆ ಮಾಡಿದ್ದು, 530 ವೀಕ್ಷಕರು, 1060 ವಿಶೇಷ ಜಾಗೃತ ದಳದ ಸದಸ್ಯರು ಆಯೋಜಿಸಲಾಗಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಯು ಕೇವಲ ಒಂದು ಗಂಟೆ 20 ನಿಮಿಷಗಳನ್ನು ಪ್ರತಿ ಪೇಪರ್‌ಗೆ ನೀಡಲಾಗಿರುತ್ತದೆ.ಒಟ್ಟಾರೆ ಪರೀಕ್ಷೆಯು 180 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.
ಪೇಪರ್ 1 ಗಣಿತ ವಿಷಯವು 60 ಪ್ರಶ್ನೆಗಳನ್ನು ಒಳಗೊಂಡಿದ್ದು ಒಂದು ಪ್ರಶ್ನೆಗೆ ಸರಾಸರಿ 1 ನಿಮಿಷಗಳ ಕಾಲಾವಧಿಯೊಳಗೆ ಉತ್ತಿರಿಸಬೇಕಿರುತ್ತದೆ ಮತ್ತು ಪೇಪರ್ 2- ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರದ ವಿಷಯಗಳು 120 ಪ್ರಶ್ನೆಗಳನ್ನು ಒಳಗೊಂಡಿದ್ದು ಪ್ರತಿ ಪ್ರಶ್ನೆಗೆ ಅರ್ಧ ನಿಮಿಷಗಳೊಳಗೆ ಉತ್ತಿರಿಸಬೇಕಿರುತ್ತದೆ.ಹಾಗಾಗಿ ಬಹಳ ಎಚ್ಚರದಿಂದ ಉತ್ತರಿಸುವುದು ಅಗತ್ಯ. ಇಲ್ಲಿ ಯಾವುದೇ ನೆಗೆಟಿವ್ ಮಾರ್ಕಿಂಗ್ ಇರುವುದಿಲ್ಲ.
ಆಗಸ್ಟ್ 30ರಂದು 6 ಸ್ಥಳಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಈ ಪರೀಕ್ಷೆಗೆ 1682 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಜತೆಗೆ 530 ಪ್ರಶ್ನೆಪತ್ರಿಕೆ ಪಾಲಕರು, 8409 ಕೊಠಡಿ ಮೇಲ್ವಿಚಾರಕರು ಹಾಗೂ 20,415 ಅಧಿಕಾರಿ ವರ್ಗದ ಸಿಬ್ಬಂದಿಯನ್ನು ಈ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ.
ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 530 ಪರೀಕ್ಷಾ ಕೇಂದ್ರಗಳ ಪೈಕಿ 86 ಕೇಂದ್ರಗಳು ಬೆಂಗಳೂರಿನಲ್ಲಿದ್ದು, ಉಳಿದ 444 ಕೇಂದ್ರಗಳು ಇನ್ನುಳಿದ ಜಿಲ್ಲೆಗಳಲ್ಲಿವೆ.
ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳು ಅನುಸರಿಸಬೇಕಾದ ನಿಯಮಗಳು ಹೀಗಿವೆ
*ಓಎಂಆರ್ ಉತ್ತರ ಪತ್ರಿಕೆಗಳಲ್ಲಿ ಅಭ್ಯರ್ಥಿಗಳು ತಮ್ಮ ಹೆಸರನ್ನು ಬರೆಯಬೇಕು
*ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ತಮ್ಮ ಹೆಸರನ್ನು ಬರೆಯಬೇಕು
*ಅಭ್ಯರ್ಥಿಗಳು ಸಿಇಟಿ ಸಂಖ್ಯೆಯನ್ನು, ಪ್ರಶ್ನೆ ಪತ್ರಿಕೆಯ ವರ್ಷನ್ ಕೋಡ್ ಓಎಂಆರ್ ಉತ್ತರ ಪತ್ರಿಕೆಯಲ್ಲಿ ಬರೆದು ಅದಕ್ಕೆ ಸಂಬಂಧಿಸಿದ ವೃತ್ತಗಳನ್ನು ಸಂಪೂರ್ಣವಾಗಿ ಬರೆಯಬೇಕು
*ಉತ್ತರಗಳನ್ನು ಓಎಂಆರ್ ಉತ್ತರ ಪತ್ರಿಕೆಯಲ್ಲಿ ಶೇಡ್ ಮಾಡುವುದರ ಮೂಲಕ ಉತ್ತರಿಬೇಕು.
*ಪ್ರವೇಶ ಪತ್ರ ಜತೆಗೆ ಕಡ್ಡಾಯವಾಗಿ ಮಾನ್ಯತೆ ಇರುವ ಕಾಲೇಜಿನ ಗುರುತಿನ ಚೀಟಿ ಇರಬೇಕು
*ದ್ವಿತೀಯ ಪಿಯುಸಿ ಪ್ರವೇಶ ಪತ್ರ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್, ಆಧಾರ್ ಕಾರ್ಡ್ ಇವುಗಳಲ್ಲಿ ಯಾವುದಾದರೂ ಒಂದನ್ನು ತೆಗೆದುಕೊಂಡು ಹೋಗಬೇಕು
*ಪರೀಕ್ಷಾ ಕೊಠಡಿ ಒಳಗೆ ವಾಚ್, ಮೊಬೈಲ್, ಟ್ಯಾಬ್ಲೆಟ್ ಕೊಂಡೊಯ್ಯುವಂತಿಲ್ಲ
*ಬ್ಲ್ಯೂ-ಬ್ಲ್ಯಾಕ್ ಬಾಲ್ ಪಾಯಿಂಟ್ ಪೆನ್‌ನ್ನು ತೆಗೆದುಕೊಂಡು ಹೋಗಬೇಕು
*ಅಭ್ಯರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಳ್ಳುವುದು ಸೂಕ್ತ
*ಪರೀಕ್ಷೆಯ ಮೊದಲನೇ ಬೆಲ್ ಆಗುವ ಅರ್ಧಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರವನ್ನು ತಲುಪಬೇಕು.