`KPSC'ಯಿಂದ `PWD' ಇಲಾಖೆ 660 ಸಹಾಯಕ ಇಂಜಿನಿಯರ್ ತಾತ್ಕಾಲಿಕ ಆಯ್ಕೆಪಟ್ಟಿ

`KPSC'ಯಿಂದ `PWD' ಇಲಾಖೆ 660 ಸಹಾಯಕ ಇಂಜಿನಿಯರ್ ತಾತ್ಕಾಲಿಕ ಆಯ್ಕೆಪಟ್ಟಿ

ಬೆಂಗಳೂರು : ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ ಹುದ್ದೆಗಳ ನೇಮಕಾತಿ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗ (KPSC) ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ.

ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್ ವಿಭಾಗ-1) 600+60 ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ನಾಗರಿಕ ಸೇವೆಗಳು ಮತ್ತು ತಿದ್ದುಪಡಿ ನಿಯಮಗಳನ್ವಯ ಸಿದ್ದಪಡಿಸಲಾಗಿದ್ದು, ಅಭ್ಯರ್ಥಿಗಳ ಮಾಹಿತಿಗಾಗಿ ಕೆಪಿಎಸ್ ಸಿ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು ಆಯ್ಕೆಪಟ್ಟಿ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಪಟ್ಟಿ ಪ್ರಕಟಿಸಿದ ಏಳು ದಿನಗಳೊಳಗೆ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು 560001 ಲಿಖಿತ ರೂಪದಲ್ಲಿ ಸಲ್ಲಿಸುವಂತೆ ಕೋರಲಾಗಿದೆ.