`KPSC' ಯಿಂದ ವಿವಿಧ ಇಲಾಖೆಗಳ 730 ಹುದ್ದೆಗಳ ಫಲಿತಾಂಶ ಪ್ರಕಟ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ಮೂರು ಇಲಾಖೆಗಳ ನೇಮಕಾತಿಗಳ ಫಲಿತಾಂಶಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.
ಲೋಕೋಪಯೋಗಿ ಇಲಾಖೆಯ 660 ಸಹಾಯಕ ಎಂಜಿನಿಯರ್ ಹುದ್ದೆಗಳ ಸಂದರ್ಶನಕ್ಕೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಮೂರಾರ್ಜಿ ವಸತಿ ಶಾಲೆಗಳ ಆರ್ಟ್ ಮತ್ತು ಕ್ರಾಫ್ಟ್ ನ 47 ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕೆಪಿಎಸ್ ಸಿ ಪ್ರಕಟಿಸಿದೆ.
ಆಯುಷ್ ಇಲಾಖೆಯ ಗ್ರೂಪ್ ಸಿ ವೃಂದದ ಅಂತಿಮ ಆಯ್ಕೆ ಪಟ್ಟಿಯನ್ನೂ ಸಹ ಕೆಪಿಎಸ್ ಸಿ ಪ್ರಕಟಿಸಿದೆ. ಅಭ್ಯರ್ಥಿಗಳು ಕೆಪಿಎಸ್ ಸಿ ಅಧಿಕೃತ ವೆಬ್ ಸೈಟ್ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.