ವಿಜೃಂಭಣೆ ಕನ್ನಡ ರಾಜ್ಯೋತ್ಸವ
ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಧಾರವಾಡದಲ್ಲಿ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ಈ ವೇಳೆ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಧ್ವಜಾರೋಹಣ ನಡೆಸಿ ತಾಯಿ ಭಾರತಾಂಬೆಗೆ ಪುಷ್ಪ ನಮನ ಸಲ್ಲಿಸಿದರು. ಇನ್ನು ಇದೇ ಸಂದರ್ಭದಲ್ಲಿ ಪೊಲೀಸ್ ಪಡೆಯ ಪಥ ಸಂಚಲನವು ಬಹಳ ಶಿಸ್ತಿನಿಂದ ಜರುಗಿತು. ಸಚಿವರ ಜೊತೆ ಜಿಲ್ಲಾಧಿಕಾರಿ ನಿತೀಶ ಪಾಟೀಲ, ಶಾಸಕ ಅಮೃತ ದೇಸಾಯಿ ಸೇರಿದಂತೆ ಹಲವರು ಭಾಗಿಯಾಗಿದ್ದರು.