Karnataka Civic Body Elections Results 2021 Live: ಮೂರು ಮಹಾನಗರ ಪಾಲಿಕೆಗಳ ಚುನಾವಣಾ ಫಲಿತಾಂಶ ಲೈವ್

Karnataka Civic Body Elections Results 2021 Live: ಮೂರು ಮಹಾನಗರ ಪಾಲಿಕೆಗಳ ಚುನಾವಣಾ ಫಲಿತಾಂಶ ಲೈವ್

ಕರ್ನಾಟಕ, ಸೆಪ್ಟೆಂಬರ್ 6: ರಾಜ್ಯದ ಬೆಳಗಾವಿ, ಹುಬ್ಬಳ್ಳಿ- ಧಾರವಾಡ ಮತ್ತು ಕಲಬುರಗಿ ಮಹಾನಗರ ಪಾಲಿಕೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಇಂದೇ ಫಲಿತಾಂಶ ಘೋಷಿಸಲಾಗುವುದು.

ಉತ್ತರ ಕರ್ನಾಟಕ ಭಾಗದ ಮೂರು ಮಹಾನಗರ ಪಾಲಿಕೆ ಚುನಾವಣೆಯ ಮತಗಳ ಎಣಿಕೆ ನಡೆಯುತ್ತಿದ್ದು, ಈ ಪಾಲಿಕೆಗಳ ಚುನಾವಣಾ ಫಲಿತಾಂಶಗಳು ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗಳಿಗೆ ದಿಕ್ಸೂಚಿಯಾಗಲಿದೆ.

ರಾಜ್ಯದ ಉತ್ತರ ಭಾಗದಲ್ಲಿ ಇರುವ ಈ ಪಾಲಿಕೆಗಳಲ್ಲಿ ಜೆಡಿಎಸ್ ಪ್ರಭಾವ ಕಡಿಮೆ ಇರುವ ಕಾರಣ, ವಾಸ್ತವವಾಗಿ ಕಾಂಗ್ರೆಸ್ ಮತ್ತು ಆಡಳಿತಾರೂಢ ಬಿಜೆಪಿ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತದೆ.

ಬುಧವಾರ ಸಂಜೆ 6 ಗಂಟೆಗೆ ಮುಕ್ತಾಯಗೊಂಡ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಶೇ.58.59 ರಷ್ಟು ಮತದಾನ ದಾಖಲಾಗಿದ್ದರೆ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಶೇ.53.81 ರಷ್ಟು ಮತದಾನ ದಾಖಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.