ಪಂಪನ ನಾಡು ಅಣ್ಣಿಗೇರಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ
ಧಾರವಾಡ ಜಿಲ್ಲೆ ಅಣ್ಣಿಗೇರಿ ನಗರದ ತಹಶೀಲ್ದಾರರ ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪನಮನ ಜ್ಯೋತಿ ಬೆಳಗಿಸುವ ಮುಖಾಂತರ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿಗಳಾದ ಮಂಜುನಾಥ ಅಮಾಸೆ ಅಧ್ಯಕ್ಷತೆಯನ್ನು ವಹಿಸಿದ್ದರು ಇನ್ನು ಅತಿಥಿಗಳಾಗಿ ರಾಜ್ಯ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಷಣ್ಮುಖ ಗುರಿಕಾರ್, ನಗರದ ಪಿಎಸ್ಐ ಲಾಲ್ ಸಾಬ್ ಜೂಲಕಟ್ಟಿ, ಪುರಸಭೆಯ ಮುಖ್ಯ ಅಧಿಕಾರಿ ಕೆ.ಎಫ್. ಕಟಗಿ, ಬಿಜೆಪಿ ನಗರ ಘಟಕದ ಅಧ್ಯಕ್ಷರಾದ ಶಿವಾನಂದ ಹೊಸಳ್ಳಿ, ಸೇರಿದಂತೆ ತಾಲೂಕು ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು. ಇನ್ನು ಅಧ್ಯಕ್ಷೆ ಭಾಷಣ ಮಾಡಿದ ತಾಲೂಕು ದಂಡಾಧಿಕಾರಿ ಮಂಜುನಾಥ ಅಮಾಸೆ ರವರು ಕನ್ನಡ ನೆಲ-ಜಲ ನಾಡು-ನುಡಿಗೆ ನಾವೆಲ್ಲರೂ ಹೋರಾಡ ಬೇಕಾಗಿರುವುದು ಅವಶ್ಯಕತೆ ಇರುತ್ತದೆ ಎಂದು ತಿಳಿಸಿದರು ಹಾಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಷಣ್ಮುಖ ಗುರಿಕಾರ್ ರವರು ಮಾತನಾಡಿ. ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸುತ್ತಾ. ಪಂಪನ ನಾಡು ಅಣ್ಣಿಗೇರಿ ನೆಲದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸುವುದು ನಮಗೆ ಮತ್ತು ನಿಮಗೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಹೇಳಿದರು. ಪಿಎಸ್ಐ ಲಾಲ್ ಸಾಬ್ ಜೂಲಕಟ್ಟಿ ರವರು ಮಾತನಾಡಿ ಕನ್ನಡ ನಾಡು ಶ್ರೀಗಂಧದ ನಾಡು ಈ ನಾಡಿಗೆ ಸಾಹಿತ್ಯದ ಕೊಡುಗೆ ಅಪಾರವಾಗಿರುತ್ತದೆ. ಅಣ್ಣಿಗೇರಿ ನಗರದ ಪಂಪನ ನಾಡಿನಲ್ಲಿ ಸೇವೆ ಮಾಡುತ್ತಿರುವುದು ಹೆಮ್ಮೆಯ ವಿಷಯ ಕನ್ನಡ ಶ್ರೀಮಂತ ಭಾಷೆ ಮತ್ತು ಸೌಂದರ್ಯ ಹೆಚ್ಚಿಸುವ ಭಾಷೆ ಎಂದು ಮಾತನಾಡಿದರು. ಈ ಸಂದರ್ಭದಲ್ಲಿ ತಾಲೂಕು ಆಡಳಿತ ಅಧಿಕಾರಿಗಳು ಕಚೇರಿ ಸಿಬ್ಬಂದಿಗಳು ನಗರದ ಗುರುಹಿರಿಯರು ಉಪಸ್ಥಿತರಿದ್ದರು.