ಐಟಿ-ಬಿಟಿ ಉದ್ಯಮ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ

ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಮಂಡಳಿ ಭವನದಲಿ ಜಿಲ್ಲಾ ಕೈಗಾರಿಕಾ ಧಾರವಾಡ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಮತ್ತು ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಸಂಯುಕ್ತಾಶ್ರಯದಲ್ಲಿ ವಾಣಿಜ್ಯ ಸಾಪ್ತಾಹ ರಪ್ತುದಾರರ ಸಮಾವೇಶ ಕಾರ್ಯಕ್ರಮ ಜರುಗಿತು. ಈ ವೇಳೆ ಕರ್ನಾಟಕ ವಾಣಿಜ್ಯೋದ್ಯಮ ಮಂಡಳಿಯ ಮಾಜಿ ಅಧ್ಯಕ್ಷ ಅಶೋಕ ಗಡಾದ ಮಾತನಾಡಿ, ಐಟಿ-ಬಿಟಿ ಉದ್ಯಮ ಕ್ಷೇತ್ರದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದು, ಈ ಹಿನ್ನೆಲೆ ಉತ್ತರ ಕರ್ನಾಟಕ ಅಭಿವೃದ್ಧಿ ಅವಶ್ಯಕತೆ ಇದೆ. ಅದಕ್ಕಾಗಿ ಸರ್ಕಾರವು ಈ ಭಾಗದತ್ತ ಹೆಚ್ಚು ಗಮನ ಹರಿಸಬೇಕು ಎಂದರು. ಕ್ರೇನ್ ಅಗ್ರಿಟೆಕ್ ಮ್ಯಾನೆಜಿಂಗ್ ಡೈರೆಕ್ಟರ್ ವಿವೇಕ ನಾಯಕ್, ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಮಹೇಂದ್ರ ಲದ್ದಡಾ ಮಾತನಾಡಿದರು. ರಮೇಶ ಪಾಟೀಲ, ಉಪಧ್ಯಾಕ್ಷ ವಿನಯ ಜವಳಿ, ಸಿದ್ದೇಶ್ವರ ಕಮ್ಮಾರ, ಉಮೇಶ ಗಡಾದ, ಅಶೋಕ ಗಡಾದ ಇದ್ದರು.