ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸಿಕೊಂಡ ಮೊದಲ ರಾಜ್ಯ ಕರ್ನಾಟಕ : ಸಿಎಂ

ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸಿಕೊಂಡ ಮೊದಲ ರಾಜ್ಯ ಕರ್ನಾಟಕ : ಸಿಎಂ

ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸಿಕೊಂಡ ಮೊದಲ ರಾಜ್ಯ ಕರ್ನಾಟಕ : ಸಿಎಂ

ಬೆAಗಳೂರು: ದೇಶದಲ್ಲೇ ಮೊದಲ ಬಾರಿಗೆ ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ನ್ನು ಕರ್ನಾಟಕ ಅನುಷ್ಠಾನಗೊಳಿಸುತ್ತಿರುವುದು ಜಡ್ಡುಗಟ್ಟಿದ ವ್ಯವಸ್ಥೆಯಿಂದ ಮುಕ್ತಿ ಹೊಂದಿ ಉದಾರೀಕರಣದ ದಿನ ಇದಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾ???ನಲ್ಲಿ ಉನ್ನತ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ ಹಾಗೂ ಈ ಶಿಕ್ಷಣ ನೀತಿ ರೂಪಿಸಿದ ರೂವಾರಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇನ್ನು ಮುಂದೆ ಸೆಪ್ಟೆಂಬರ್ ೫ ಶಿಕ್ಷಕರ ದಿನಾಚರಣೆಯಾದರೆ, ಆಗಸ್ಟ್ ೨೩ ಶಿಕ್ಷಣದ ದಿನವಾಗಲಿದೆ.

ನಮಗೆ ಬೇಕಾದ ಅವಕಾಶಗಳನ್ನು ಆಯ್ಕೆ ಮಾಡಿಕೊಳ್ಳಲು ಅನುವು ಮಾಡಿಕೊಟ್ಟ ಈ ದಿನ ಉದಾರೀಕರಣ ಹೊಂದಿದ ದಿನವಾಗಿದೆ ಎಂದು ಹೇಳಿದರು. ಕಳೆದ ಒಂದೂವರೆ ವರ್ಷದಿಂದ ಕೋವಿಡ್ ಕಾರಣದಿಂದಾಗಿ ಶಾಲಾ-ಕಾಲೇಜುಗಳು ಆರಂಭವಾಗಿರಲಿಲ್ಲ. ಇಂದು ೯ ರಿಂದ ೧೨ನೆ ತರಗತಿವರೆಗೆ ಶಾಲಾ-ಕಾಲೇಜು ಆರಂಭಿಸಿದ್ದೇವೆ. ಇದು ಮಕ್ಕಳಿಗೆ ಕೋವಿ???ನಿಂದ ಸಿಕ್ಕ ಸ್ವತಂತ್ರ ಎಂದು ಅಭಿಪ್ರಾಯಪಟ್ಟರು. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಕ್ಕಳು ತಮಗೆ ಬೇಕಾದ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳೂ ಇರುತ್ತವೆ.

ಈ ಶಿಕ್ಷಣ ವ್ಯವಸ್ಥೆಯಲ್ಲಿ ಭವಿಷ್ಯಕ್ಕೆ ಭದ್ರ ಬುನಾದಿ ಒದಗಿಸುವ ನೀತಿ ಇದೆ. ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ ವಿದ್ಯಾರ್ಥಿಗಳನ್ನು ರೂಪಿಸಬೇಕು. ಬದಲಾದ ವ್ಯವಸ್ಥೆಯಲ್ಲಿ ಮುಂದುವರೆದ ರಾಷ್ಟ್ರಗಳಿಗೆ ಸ್ಪರ್ಧೆ ಒಡ್ಡಬೇಕೆಂದರೆ ಶಿಕ್ಷಣದಲ್ಲೂ ಬದಲಾಗಬೇಕು. ಹೀಗಾಗಿಯೇ ನಾವು ದೇಶದಲ್ಲೇ ಮೊದಲ ಬಾರಿಗೆ ಇದನ್ನು ಅನುಷ್ಠಾನ ಮಾಡುತ್ತಿದ್ದೇವೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರು ದೂರದೃಷ್ಟಿಯುಳ್ಳ ನಾಯಕ. ಶಿಕ್ಷಣದಲ್ಲಿ ಬದಲಾವಣೆ ಮಾಡಿದರೆ ಮಾತ್ರ ಸಮರ್ಪಕ ರಾಷ್ಟ್ರ ಕಟ್ಟಲು ಸಾಧ್ಯ ಎಂದು ಅವರಿಗೆ ಅರಿವಿತ್ತು.

ಹಾಗಾಗಿಯೇ ಶಿಕ್ಷಣದಲ್ಲಿ ಸಮಗ್ರ ಬದಲಾವಣೆ ತರಲು ಆಲೋಚಿಸಿದರು. ಅವರ ಚಿಂತನೆ, ದೂರದೃಷ್ಟಿಯ ಫಲವೇ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ. ಯಾರಿಗೆ ಭವಿಷ್ಯದ ಬಗ್ಗೆ ದೂರದೃಷ್ಟಿ ಇರುತ್ತದೆಯೋ ಅವರು ಕೆಲವು ಬದಲಾವಣೆ ತರಲು ಪ್ರಯತ್ನಿಸುತ್ತಾರೆ. ಈ ಶಿಕ್ಷಣ ನೀತಿಯಲ್ಲಿ ಹಲವು ಟೀಕೆ-ಟಿಪ್ಪಣಿಗಳು ಎದುರಾದವು. ನಾವು ಅದರಲ್ಲಿರುವ ಸಕಾರಾತ್ಮಕ ವಿಷಯ ಪರಿಗಣಿಸಬೇಕೆ ಹೊರತು ನಕಾರಾತ್ಮಕ ಅಂಶ ಅನಗತ್ಯ ಎಂದರು.

ಶಿಕ್ಷಣ ನೀತಿ ಅನುಷ್ಠಾನವಾಗುತ್ತಿರುವುದರಿಂದ ಮಕ್ಕಳ ಚಿಂತನೆ, ಆಲೋಚನೆಗಳು ಬದಲಾಗಲಿವೆ. ನಮ್ಮ ಸರ್ಕಾರ ಇದಕ್ಕೆ ಸಂಪೂರ್ಣ ಸಹಕಾರ ಕೊಡಲಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಹೇಳಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾತನಾಡಿ, ದೇಶದಲ್ಲೇ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಷ್ಠಾನ ಮಾಡುತ್ತಿರುವ ಮೊದಲ ರಾಜ್ಯವಾಗಿದೆ. ಇದಕ್ಕಾಗಿ ನಾನು ಮುಖ್ಯಮಂತ್ರಿ ಹಾಗೂ ಸಂಸದ, ಸಹೋದ್ಯೋಗಿಗಳನ್ನು ಅಭಿನಂದಿಸುವುದಾಗಿ ಹೇಳಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಭವಿಷ್ಯಕ್ಕೆ ತಕ್ಕಂತೆ ವಿದ್ಯಾರ್ಥಿಗಳನ್ನು ರೂಪಿಸಲಿದೆ. ಮುಂದುವರೆದ ರಾಷ್ಟ್ರಗಳಿಗೆ ಪೈಪೋಟಿ ನೀಡಬೇಕಾದರೆ ಇದು ಅಗತ್ಯವೆಂದು ಅಭಿಪ್ರಾಯಪಟ್ಟರು. ೨೧ನೆ ಶತಮಾನವು ಭಾರತದ್ದಾಗಬೇಕೆಂಬುದೇ ಪ್ರಧಾನಿಯವರ ಕನಸಾಗಿದೆ. ಮುಂದುವರೆದ ರಾಷ್ಟ್ರಗಳಲ್ಲಿ ಕಾಲಕ್ಕೆ ತಕ್ಕಂತೆ ಶಿಕ್ಷಣ ವ್ಯವಸ್ಥೆ ಬದಲಾಯಿಸುತ್ತ ಬಂದಿದ್ದಾರೆ. ಅದೇ ರೀತಿ ನನ್ನ ಪ್ರಧಾನಿಯವರು ಸಹ ಹೊಸ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತಂದಿದ್ದಾರೆ. ಇದನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳುವಂತೆ ಕಿವಿಮಾತು ಹೇಳಿದರು.

ಹೊಸ ಶಿಕ್ಷಣ ನೀತಿ ಮುಂದೆ ಸಾಕಷ್ಟು ಸವಾಲುಗಳಿವೆ. ಕರ್ನಾಟಕ ಸರ್ಕಾರ ಅದನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಿದೆ ಎಂಬ ವಿಶ್ವಾಸ ನಮಗಿದೆ. ಅನೇಕ ಶಿಕ್ಷಣ ತಜ್ಞರ ಸಲಹೆ ಪಡೆದು ಇದನ್ನು ಅನುಷ್ಠಾನ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಎಂದರು. ಶಿಕ್ಷಣ ನೀತಿ ಅನುಷ್ಠಾನಗೊಳಿಸುವ ಮೊದಲು ಸಮಾಜದಲ್ಲಿ ಸಲಹೆ ಪಡೆಯಲಾಗಿದೆ. ಅವರ ಸಲಹೆ-ಸೂಚನೆಗಳನ್ನು ಸೇರ್ಪಡೆ ಮಾಡಲಾಗಿದೆ. ಕರ್ನಾಟಕ ಸರ್ಕಾರ ಮಾದರಿಯಾಗುವಂತಹ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸುವ ಮೂಲಕ ದೇಸಕ್ಕೆ ಮಾದರಿಯಾಗುತ್ತದೆ ಎಂದರು.
ಸಾಮಾಜಿಕ, ಆರ್ಥಿಕ ಸೇರಿದಂತೆ ಎಲ್ಲ ರೀತಿಯ ಸಮಸ್ಯೆಗಳಿಗೆ ಶಿಕ್ಷಣ ಹಾಗೂ ಕೌಶಲ್ಯತೆಯೇ ಪರಿಹಾರವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ತಿಳಿಸಿದರು.

ಐದು ವರ್ಷಗಳ ಸುದೀರ್ಘ ಸಮಾಲೋಚನೆ, ಎಲ್ಲೆಡೆಯಿಂದ ಮಾಹಿತಿ ಪಡೆದು ನೀತಿ ರಚಿಸಲಾಗಿದೆ ಎಂದರು. ಕರ್ನಾಟಕ ಉನ್ನತ ಮಟ್ಟದ ಸ್ಥಾನ ಪಡೆಯಲು ಶಿಕ್ಷಣದಿಂದಲೇ ಸಾಧ್ಯ. ಗುಣಮಟ್ಟದ ಶಿಕ್ಷಣ ನೀಡಲು ಅಡ್ಡಿಯಾಗುತ್ತಿರುವ ಲೋಪದೋಷಗಳು ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪರಿಹಾರವಾಗಲಿವೆ ಎಂದು ಪ್ರತಿಪಾದಿಸಿದರು. ಕಾರ್ಯಕ್ರಮದಲ್ಲಿ ವಿಜ್ಞಾನಿ ಕಸ್ತೂರಿ ರಂಗನ್, ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಉಪಸ್ಥಿತರಿದ್ದರು.