ಕಸಾಪ ಚುನಾವಣೆ ತಯಾರಿ, ಅಭ್ಯರ್ಥಿಗಳ ಪ್ರಚಾರ ಆರಂಭ.

ಧಾರವಾಡ.

ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆಯ ದಿನಾಂಕ ನಿಗದಿಗೆ ಚುನಾವಣಾ ಆಯೋಗ ಮುಂದಾಗಿದೆ. ಹೀಗಾಗಿ ಜಿಲ್ಲೆಯಲ್ಲಿ ಚುನಾವಣೆಗೆ ತಯಾರಿ ಶುರುವಾಗಿದ್ದು, ಅಭ್ಯರ್ಥಿಗಳು ಪ್ರಚಾರ ಆರಂಭಿಸಿದ್ದಾರೆ. ಈ ನಿಟ್ಟಿನಲ್ಲಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿ.ಕೆ ರಾಮೇಗೌಡ ಅವರು ಈ ಬಾರಿಯ ಕಸಾಪ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದರು. ಅಲ್ಲದೇ ಕಳೆದ 40 ವರ್ಷದಿಂದ ಕನ್ನಡ ಸಾಹಿತ್ಯ, ಕನ್ನಡಪರ ಹೋರಾಟಗಳಲ್ಲಿ ಪಾಲ್ಗೊಳ್ಳುತ್ತ ಅತ್ಯುತ್ತಮ ಕಾರ್ಯಕ್ರಮ ನಡೆಸುವ ಕೆಲಸ ಮಾಡಿದ್ದೇನೆ. ಕನ್ನಡ ಸಾಹಿತ್ಯ ಪರಿಷತ್ ನ ರಾಜ್ಯ ಗೌರವ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದೇನೆ. ಕನ್ನಡ ಪರ ಕಾರ್ಯಗಳನ್ನು ಮೆಚ್ಚಿ ಕನ್ನಡ ಸಾಹಿತ್ಯ ಪರಿಷತ್ ಗೆ ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡಿಕೊಡಬೇಕೆಂದು ಮನವಿ ಮಾಡಿದರು......