ಕೊಪ್ಪಳ ಜಿಲ್ಲಾಡಳಿತ ಅಸ್ಪೃಶ್ಯತೆ ನಿವಾರಣೆಗೆ ಮುಂದಾಗಿದೆ
ಕೊಪ್ಪಳ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಪ್ರಕರಣಗಳು ಹೆಚ್ಚಾದ ಹಿನ್ನಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ಅಸ್ಪೃಶ್ಯತೆ ನಿವಾರಣೆಗೆ ಮುಂದಾಗಿದೆ.ಹೌದು.ಇಂದೂ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ಜಿಲ್ಲೆಯ ದೇವಸ್ಥಾನದ ಅರ್ಚಕರು,ಹೋಟಲ್ ಮಾಲೀಕರುನ್ನಳೊಗೊಂಡ ಸಭೆಯಲ್ಲಿ ಅಸ್ಪೃಶ್ಯತೆ ನಿವಾರ ನಿವಾರಣೆಗಾಗಿ ಸಭೆ ಕರೆಯಲಾಗಿತ್ತು.ಸಭೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಅಸ್ಪೃಶ್ಯತೆ ನಡೆಯಭಾರದು ಎಂದು ಪಣತೊಡಲಾಯಿತು.ಇನ್ನೂ ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಹೆಚ್ಚಾದ ಹಿನ್ನಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದ್ದು ಇಂದು ದೇವಸ್ಥಾನದ ಅರ್ಚರಿಗೆ ಹಾಗೂ ಹೋಟಲ್ ಮಾಲೀಕರಿಗೆ ಕರೆದು ಸಭೆ ಕರೆದಿದ್ದರು.ಜಿಲ್ಲೆಯಲ್ಲಿ ದಲಿತರಿಗೆ ದೇವಸ್ಥಾನದಲ್ಲಿ ಪ್ರವೇಶ ನಿಬೃಂಧ ಹಾಗೂ ಹೋಟಲ್ ಗಳಲ್ಲಿ ದಲಿತರಿಗೆ ಪ್ರವೇಶ ಇಲ್ಲದಿರುವುದನ್ನಿ ಗಮನಿಸಿದ ಜಿಲ್ಲಾಡಳಿತ ಈ ಸಭೆ ಆಯೋಜನೆ ಮಾಡಿ ಜಾಗೃತಿ ಮೂಡಿಸಲಾಯಿತು.ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸೂರಳ್ಕರ್,ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಾರಿ ಟಿ.ಶ್ರೀಧರ್ ರವರು ಎಲ್ಲಾ ಜಿಲ್ಲೆಯ ದೇವಸ್ಥಾನದ ಅರ್ಚಕರಿಗೆ ಹಾಗೂ ಹೋಟೆಲ್ ಮಾಲೀಕರಿಗೆ ವಾರ್ನಿಂಗ್ ನೀಡಿದರು...