ಪರಿಷತ್ ಚುನಾವಣೆಯಲ್ಲಿ ಗೆಲುವು : ಹೊಸ ದಾಖಲೆ ಬರೆದ ಪಕ್ಷೇತರ ಅಭ್ಯರ್ಥಿ ಲಖನ ಜಾರಕಿಹೊಳಿ |Belagavi

ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಗೆಲುವು ಸಾಧಿಸುವ ಮುಖೆನ ಹೊಸ ಇತಿಹಾಸ ಬರೆದಿದ್ದಾರೆ. ಬೆಳಗಾವಿ ದ್ವಿಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ವರ್ಧೆ ಮಾಡಿದ್ದ ಲಖನ ಜಾರಕಿಹೊಳಿ ಅವರು 2ನೇ ಪ್ರಾಶಸ್ತ್ಯದ ಮತಗಳಿಂದ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಒಬ್ಬನೆ ಒಬ್ಬ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ದಾಖಲೆಯನ್ನು ನಿರ್ಮಿಸಿದ್ದಾರೆ. ಇನ್ನೂ ಕಳೆದ ಮೂರು ದಶಕಗಳಿಂದ ಜಾರಕಿಹೊಳಿ ಕುಟುಂಬದ ಮೂವರ ಸಹೋದರರು ಶಾಸಕರಾಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿದರು ಈಗ ಪರಿಷತ್ ಚುನಾವಣೆ ಗೆಲುವ ಮೂಲಕ ಒಂದೆ ಕುಟುಂಬದ ನಾಲ್ಕು ಸಹೋದರರು ಶಾಸಕರಾಗುವ ಮೂಲಕ ರಾಜ್ಯದಲ್ಲಿ ಜಾರಕಿಹೊಳಿ ಕುಟುಂಬ ಮತ್ತೊಂದು ಹೊಸ ದಾಖಲೆಗೆ ಮುನ್ನುಡಿ ಬರೆದಂತಾಗಿದೆ