ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧ ಲಖನ್ ಜಾರಕಿಹೊಳಿ |Belagavi|
ಚುನಾವಣೆಯಲ್ಲಿ ಬಂದು ಹೋಗುವ ವ್ಯಕ್ತಿಗಳನ್ನು ನಂಬಬೇಡಿ. ಅಂತಹವರಿಂದ ಅಭಿವೃದ್ಧಿ ಸಾಧ್ಯವಿಲ್ಲ. ವಿಧಾನ ಪರಿಷತ್ತಿಗೆ ನನ್ನನ್ನು ಚುನಾಯಿಸಿದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಿದ್ಧವಿರುವುದಾಗಿ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಹೇಳಿದರು. ಖಾನಾಪೂರದ ಪಾಟೀಲ್ ಕಲ್ಯಾಣ ಮಂಟಪದಲ್ಲಿ ಜರುಗಿದ ಪ್ರಚಾರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ಗ್ರಾಮ ಪಂಚಾಯತಿಗೆ ಹೆಚ್ಚಿನ ಅಧಿಕಾರ ತರಲು ಸಂಕಲ್ಪ ಮಾಡಿದ್ದೇನೆ. ನಾನು ಸದಾ ಜನಸೇವೆ ಮಾಡುತ್ತೇನೆ. ಅಭಿವೃದ್ಧಿಯಲ್ಲಿ ಹಿಂದುಳಿದ ಖಾನಾಪೂರ ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತೇನೆ. ಅಭಿವೃದ್ಧಿಗೆ ಪೂರಕವಾಗಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಮಜರ್ ಖಾನಾಪುರೆ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ, ನ್ಯಾಯವಾದಿ ಎಚ್.ಎನ್. ದೇಸಾಯಿ, ಕ್ಷತ್ರೀಯ ಮರಾಠಾ ಪರಿಷತ್ ಜಿಲ್ಲಾ ಉಪಾಧ್ಯಕ್ಷ ದಿಲೀಪ ಪವಾರ, ಜಿಪಂ ಮಾಜಿ ಸದಸ್ಯರಾದ ತುಕಾರಾಮ ಕಾಗಲ, ವಿಶಾಲ ಪಾಟೀಲ, ಮೇಘಾ ಕುಂದರಗಿ, ಪಟ್ಟಣ ಪಂಚಾಯತ ಸದಸ್ಯರು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.