ಲಸಿಕಾ ಮೇಳ, ಡಿಸಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಹಿನ್ನೆಲೆ ಧಾರವಾಡ ಜಿಲ್ಲೆಯಾದ್ಯಂತ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಧಾರವಾಡಲ್ಲಿ ಜಿಲ್ಲೆಯಾದ್ಯಂತ ಈಗಾಗಲೇ ಲಸಿಕಾ ಅಭಿಯಾನ ಚುರುಕುಗೊಂಡಿದ್ದು ಸಾವಿರಾರು ಜನರ ಲಸಿಕಾ ಕೇಂದ್ರಗಳ ಮುಂದೆ ಜನ ಕ್ಯೂನಲ್ಲಿ ನಿಂತಿದ್ದಾರೆ. 85.ಸಾವಿರ ಜನರಿಗೆ ಇಂದು ಲಸಿಕೆ ನೀಡುವ ಟಾರ್ಗೆಟ್ ಹಮ್ಮಿಕೊಳ್ಳಲಾಗಿದೆ ಎಂದು ಧಾರವಾಡದ ಡಿಸಿ ನಿತೀಶ್ ಪಾಟೀಲ ಹೇಳಿದ್ದಾರೆ. ಅನಂತರ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಬೃಹತ್ ಕೋವಿಡ್ ಲಸಿಕಾಕರಣ ಅಭಿಯಾನದಲ್ಲಿ ಜಿಲ್ಲೆಯಲ್ಲಿ 85 ಸಾವಿರ ಕೋವಿಡ್ ಲಸಿಕೆ ನೀಡಿವ ಗುರಿ ಹೊಂದಲಾಗಿದೆ. ಇನ್ನು ಜಿಲ್ಲೆಯಲ್ಲಿ 421ಲಸಿಕಾ ಕೇಂದ್ರದಲ್ಲಿ ಲಸಿಕಾ ಅಭಿಯಾನ‌ ಆರಂಭವಾಗಿದೆ. ಬೆಳಗ್ಗೆಯಿಂದಲೇ ಲಸಿಕೆ ಪಡೆಯಲು ಜನರು ಲಸಿಕಾ ಕೇಂದ್ರದತ್ತ ಮುಖ ಮಾಡುತ್ತಿದ್ದಾರೆ ಜಿಲ್ಲೆಯಲ್ಲಿ ಜನರಿಗೆ ಲಸಿಕೆ ನೀಡಲಾಗಿದೆ.ಸದುಪಯೋಗ ಪಡೆದುಕೊಳ್ಳಬೇಕು ಎಂದ್ರು