ಸಂಸದೆ ಸುಮಲತಾ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಶಾಸಕ ರವೀಂದ್ರ ಒತ್ತಾಯ
ಮಂಡ್ಯ, ; ಜಿಲ್ಲೆಯ ಸಂಸದೆ ಸುಮಲತಾ ಅಂಬರೀಶ್ ಸುತ್ತ ಗೂಂಡಾ ಮತ್ತು ವಂಚಕರಿದ್ದಾರೆ. ಅವರ ಲೆಟರ್‌ಹೆಡ್ ದುರ್ಬಳಕೆಯಾಗುತ್ತಿದ್ದು, ಕೂಡಲೇ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಆಗ್ರಹಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸುಮಲತಾ ಅವರ ಅಟೆಂಡರ್ ವಂಚಕ, ವೈದ್ಯಕೀಯ ಸೀಟು ಕೊಡಿಸುವುದಾಗಿ ಅಮಾಯಕ ಜನರಿಗೆ ಪಂಗನಾಮ ಹಾಕಿದ್ದಾನೆ ಎಂದು ದೂರಿದರು.ಸುಮಲತಾ ಸುತ್ತ ಇರುವವರು ಅಧಿಕಾರಿಗಳಿಗೆ ಬೆದರಿಕೆ ಹಾಕಿ ಹಣಕ್ಕಾಗಿ ಪೀಡಿಸುತ್ತಿದ್ದಾರೆ. ಸುಮಲತಾಗೆ ಆಪ್ತ ಕಾರ್ಯದರ್ಶಿ ಎಂಬ ಹುದ್ದೆಯೇ ಇಲ್ಲ. ಶ್ರೀನಿವಾಸ್‌ಭಟ್ ಎಂಬ ವ್ಯಕ್ತಿಯನ್ನು ಅನಧಿಕೃತವಾಗಿ ನೇಮಕ ಮಾಡಿಕೊಂಡಿದ್ದಾರೆ.ಈ ಹಿನ್ನೆಲೆಯಲ್ಲಿ ಸುಮಲತಾ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದರು.
ನಿನ್ನೆಯಷ್ಟೇ ಮಂಡ್ಯದಲ್ಲಿ ನಡೆದ ಸಭೆಯಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮತ್ತು ಸುಮಲತಾ ಅಂಬರೀಶ್ ವಿರುದ್ಧ ತೀವ್ರ ವಾಕ್ಸಮರ ನಡೆದಿತ್ತು. ಇದರ ಬೆನ್ನಲ್ಲೆ ಸುಮಲತಾ ವಿರುದ್ದ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಜೆಡಿಎಸ್ ಮುಖಂಡ ಹೇಳಿಕೆ ನೀಡಿದ್ದಾರೆ.