ಶಾಸಕ ರಾಮಚಂದ್ರರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

ದಾವಣಗೆರೆ ಜಗಳೂರು ಕ್ಷೇತ್ರದ ಶಾಸಕ ಎಸ್ ವಿ ರಾಮಚಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ವಾಲ್ಮೀಕಿ ಸಮಾಜದ ಅಧ್ಯಕ್ಷ ಬಿ. ವೀರಣ್ಣ ಆಗ್ರಹಿಸಿದರು. ನಗರದ ನಯಕರ ಹಾಸ್ಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ ಜಿಲ್ಲೆಯಲ್ಲಿ ೨.೫೦ ಲಕ್ಷ ವಾಲ್ಮೀಕಿ ಜನಾಂಗವಿದೆ. ನಮ್ಮ ಜನಾಂಗದ ಅಭಿವೃದ್ಧಿಗಾಗಿ ಶಾಸಕ ರಾಮಚಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಹೇಳಿದರು.ಕಾಂಗ್ರೆಸ್ ಮುಖಂಡ ಹದಡಿ ಹಾಲೇಶಪ್ಪ ಇದ್ದರು.