ಗೆದ್ದು ಬೀಗಿದ ಉಭಯ ನಾಯಕರು: ಧಾರವಾಡದಲ್ಲಿ ವಿಜಯೋತ್ಸವ...

ಧಾರವಾಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ನ ಎರಡು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಒಂದು ಸ್ಥಾನಗಳನ್ನು ಪಡೆದುಕೊಂಡಿವೆ. ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಹಾಗೂ ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಅವರು ಪ್ರಥಮ ಪ್ರಾಶ್ಯಸ್ತ್ಯದ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಮತ ಎಣಿಕೆ ಪೂರ್ಣಗೊಂಡು, ಫಲಿತಾಂಶ ಹೊರ ಬಂದ ನಂತರ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ವಿಜಯೋತ್ಸವ ಆಚರಿಸಿದರು. ಪ್ರದೀಪ್ ಶೆಟ್ಟರ್ ಅವರನ್ನು ಹೆಗಲ ಮೇಲೆ ಹೊತ್ತು ಕುಣಿದ ಬಿಜೆಪಿ ಕಾರ್ಯಕರ್ತರು ಅವರ ಮೇಲೆ ಹೂಮಳೆ ಸುರಿಸಿದರು. ಇತ್ತು ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಪರ ಘೋಷಣೆಗಳನ್ನು ಕೂಗಿದ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸುವ ಮೂಲಕ ಸಿಹಿ ಹಂಚಿ ಸಂಭ್ರಮಿಸಿದರು. ಒಟ್ಟಾರೆಯಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕರ ಪರ ಘೋಷಣೆಗಳನ್ನು ಕೂಗಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.