ಗ್ರಾಮಸ್ಥರ ಸಮಸ್ಯೆ ಆಲಿಸಿದ ಶಾಸಕ ಬಂಡೆಪ್ಪ ಖಾಶೆಂಪುರ್
ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿ ನಿಜಾಂಪೂರ ಗ್ರಾಮಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಭೇಟಿ ನೀಡಿ ಗ್ರಾಮ ವೀಕ್ಷಣೆ ನಡೆಸಿ ಗ್ರಾಮಸ್ಥರ ಸಮಸ್ಯೆ ಆಲಿಸಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇದೇ ವೇಳೆ ಮಾತನಾಡಿದ ಅವರು, ನಾನು ಗ್ರಾಮೀಣ ಭಾಗದ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡುತ್ತಾ ಬಂದಿದ್ದೇನೆ. ಈಗ ನಿಜಾಂಪೂರ ಗ್ರಾಮದ ಅನೇಕ ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದಿದ್ದಿರಿ. ಅವುಗಳನ್ನು ಪರಿಹರಿಸುವ ಕೆಲಸವನ್ನು ಮಾಡುತ್ತೇನೆ. ಗ್ರಾಮದ ರಸ್ತೆ, ಚರಂಡಿ, ನೀರಿನ ಸಮಸ್ಯೆಗಳನ್ನು ಹಂತಹಂತವಾಗಿ ಪರಿಹರಿಸುವ ಕೆಲಸ ಮಾಡುತ್ತೇನೆಂದು ಹೇಳಿದರು.