ಹುಬ್ಬಳ್ಳಿಯ ಚಿರತೆ, ಕವಲಗೇರಿ ಗ್ರಾಮದಲ್ಲಿ ಪತ್ತೆ.
ವಾಣಿಜ್ಯನಗರಿ ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಮೂರ್ನಾಲ್ಕು ದಿನಗಳ ಹಿಂದೆ ಕಾಣಿಸಿಕೊಂಡು ಜನರ ನಿದ್ದೆಗೆಡಿಸಿದ್ದ ಚಿರತೆಯ ಸೆರೆಹಿಡಿಯಲು ಅರಣ್ಯ ಇಲಾಖೆ ಡ್ರೋನ್ ಬಳಸುತ್ತಿದೆ. ಜೊತೆಗೆ ಅಲ್ಲಲ್ಲಿ ಬೋನ್ ಕೂಡ ಇರಿಸಿದೆ. ಪಾದಚಾರಿಯೊಬ್ಬರ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದರೂ ಚಿರತೆ ಯಾರ ಕಣ್ಣಿಗೂ ಬಿದ್ದಿರಲಿಲ್ಲ. ಶನಿವಾರ ರಾತ್ರಿ ನೃಪತುಂಗ ಬೆಟ್ಟದ ಕೆಳ ಭಾಗದಲ್ಲಿರುವ ರಾಜನಗರದ ಸೆಂಟ್ರಲ್ ಸ್ಕೂಲ್ ಆವರಣದಲ್ಲಿ ಚಿರತೆ ಚಲನವಲನದ ದೃಶ್ಯಾವಳಿಗಳು ಸ್ಥಳೀಯರ ಮೊಬೈಲಿನಲ್ಲಿ ಸೆರೆಯಾಗಿರುವುದನ್ನು ವೀಕ್ಷಿಸಿದ ಅರಣ್ಯ ಇಲಾಖೆ ಸಿಬ್ಬಂದಿ ತೀವ್ರ ಕಾರ್ಯಾಚರಣೆ ನಡೆಸಿದರು. ಇಷ್ಟೆಲ್ಲಾ ಹರಸಾಹಸಪಟ್ಟರೂ ಚಿರತೆ ಸೆರೆಯಾಗದೆ ಇರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ.