ಅಪಘಾತ ರಸ್ತೆ ಮಧ್ಯೆ ಹೊತ್ತಿ ಉರಿದ ಲಾರಿಗಳು
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ೬೫ ರ ಡಾಬಾ ಬಳಿ ಪರಸ್ಪರ ಲಾರಿಗಳು ಡಿಕ್ಕಿ ಹೊಡೆದಿದ್ದರಿಂದ ಒಂದು ಲಾರಿ ಸುಟ್ಟು ಭಸ್ಮವಾದರೆ, ಇನ್ನೊಂದು ಲಾರಿ ಭಾಗಶಃ ಸುಟ್ಟು ಕರಕಲಾಗಿದೆ. ಮಹಾರಾಷ್ಟ್ರದ ಪುಣೆಯಿಂದ ಹೈದ್ರಾಬಾದ್ಗೆ ತೆರಳುತ್ತಿದ್ದ ಲಾರಿ ಮುಂದೆ ಸಾಗುತ್ತಿದ್ದ ಕಂಟೇನರ್ಗೆ ಹಿಂಬದಿಯಿAದ ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿದೆ. ಸಿಮೆಂಟ್ ತುಂಬಿದ್ದ ಲಾರಿ ಸಂಪುರ್ಣ ಭಸ್ಮ ಆಗಿದ್ದು ಪ್ರಾಣ ಹಾನಿ ಸಂಭವಿಸಿಲ್ಲ. ಬಸವಕಲ್ಯಾಣ ಅಗ್ನಿಶಾಮಕ ತಂಡ ಬೆಂಕಿ ನಂದಿಸಿದ್ದಾರೆ. ಸಂಚಾರಿ ಪಿಎಸ್ ಐ ಪುಷ್ಪಾ ಭೇಟಿ ಪರಿಶೀಲಿಸಿದರು. ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.