ಮಾತೃಭಾಷೆ ಮೇಲೆ ಪ್ರೀತಿಯಿದ್ದರೆ ಹಿಡಿತ ಸಾಧ್ಯ: ಸಚಿವ ಎಂಟಿಬಿ ನಾಗರಾಜ್
ಹೊಸಕೋಟೆ ಟೌನ್ನ ಪಾರ್ವತಿಪುರದ ಶ್ರೀ ಆಂಜನೇಯ ಸ್ವಾಮಿ ದೇವಲಯದ ಎಂಟಿಬಿ ಸರ್ಕಲ್ನಲ್ಲಿ 66ನೇ ಕರ್ನಾಟಕ ರಾಜ್ಯೋತ್ಸವವನ್ನು ಮೊದಲ ಬಾರಿಗೆ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಚಿವ ಎಂಟಿಬಿ ನಾಗರಾಜ್ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಂತರ ದಿವಂಗತ ಪುನೀತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಒಂದು ನಿಮಿಷಗಳ ಕಾಲ ಮೌನಚಾರಣೆ ಮಾಡುವ ಮೂಲಕ ಸಂತಾಪ ಸೂಚಿಸಿದರು. ಈ ವೇಳೆ ಮಾತನಾಡಿ, ಮಾತೃಭಾಷೆ ಮೇಲೆ ಪ್ರತಿಯೊಬ್ಬರಿಗೂ ಪ್ರೀತಿ ಇರಬೇಕು. ಅಂದಾಗ ಮಾತ್ರ ಭಾಷೆ ಮೇಲೆ ಹಿಡಿತ ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಟೌನ್ ಬ್ಯಾಂಕ್ ನಿರ್ದೇಶಕ ಅಪ್ಸರ್, ನಗರ ಸಭೆ ಅಧ್ಯಕ್ಷ ಅರುಣ್ ಕುಮಾರ್ ,ಕೌನ್ಸಿಲರ್ ಗಳಾದ ಶಿವನಂದ,ನವೀನ್, ಹಾಗೂ ಜಯಕುಮಾರ್ ಮತ್ತಿತರರು ಭಾಗವಹಿಸಿದ್ದರು.