ಎಂಟಿಬಿ ನಾಗರಾಜ್ ವಿರುದ್ಧ ಶರತ್ ಬಚ್ಚೇಗೌಡ ವಾಗ್ದಾಳಿ

ಹೊಸಕೋಟೆ

ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಶಾಸಕ ಶರತ್ ಬಚ್ಚೇಗೌಡ ಅವರು ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಎಡ ಕನಹಳ್ಳಿ ಗ್ರಾಮದಲ್ಲಿ ವಾಗ್ದಾಳಿ ನಡೆಸಿದರು. ಹೊಸಕೋಟೆ ತಾಲೂಕಿನ ಹೆಡಕನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರ ಗುದ್ದಲಿ ಪೂಜೆ ಕುರಿತು ವಾಗ್ದಾಳಿ ನಡೆಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಕ್ರಮದಲ್ಲಿ ಯಾವೊಬ್ಬ ಅಧಿಕಾರಿಗಳು ಇಲ್ಲದೆ ಇರುವುದು ರಾಜ್ಯ ಸರಕಾರಕ್ಕೆ ಮಾಡಿದ ಅಪಮಾನ. ಈ ಭಾಗದ ಜನಪ್ರತಿನಿಧಿಯಾದ ನನ್ನ ಗಮನಕ್ಕೂ ತರದೆ ಈ ರೀತಿ ಮಾಡಿರುವುದು ಸರಿಯಲ್ಲ. ಸಚಿವರು ದೊಡ್ಡಬಳ್ಳಾಪುರ, ನೆಲಮಂಗಲ ಕ್ಷೇತ್ರದಲ್ಲಿ ಸಹ ಇದೆ ರೀತಿ ಮಾಡುತ್ತಾರೆ ಅಷ್ಟಕ್ಕೂ ಹೊಸಕೋಟೆ ಗಡಿ ದಾಟಿದ್ದಾರೋ ಇಲ್ಲವೋ ತಿಳಿದಿಲ್ಲ ಎಂದರು.