ಕನ್ನಡ ಚಿತ್ರರಂಗದ ಬಗ್ಗೆ ಕಿರುಚಿತ್ರ ನಿರ್ಮಿಸಿ, ಜಗತ್ತಿನ ಮುಂದಿರಿಸಿ

ಬೆಂಗಳೂರು

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವಿದೇಶಿ ಚಿತ್ರಗಳ ಪ್ರದರ್ಶನದೊಂದಿಗೆ, ಆ ಚಿತ್ರತಂಡದವರನ್ನೂ ಆಹ್ವಾನಿಸುವ ಮೂಲಕ ಚಿತ್ರೋತ್ಸವವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಲಹೆ ನೀಡಿದರು. ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರು ಹಾಗೂ ಅಧಿಕಾರಿಗಳೊಂದಿಗೆ ಅಕಾಡೆಮಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿ ಕನ್ನಡ ಚಿತ್ರರಂಗ ಬೆಳೆದು ಬಂದ ಬಗ್ಗೆ ಒಂದು ಕಿರುಚಿತ್ರ ನಿರ್ಮಿಸಿ ನಮ್ಮ ಚಿತ್ರರಂಗದ ಸಾಧನೆಯನ್ನು ಜಗತ್ತಿನ ಮುಂದಿಡಬೇಕು ಎಂದು ತಿಳಿಸಿದರು. ಸಭೆಯಲ್ಲಿ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ವಾರ್ತಾ ಇಲಾಖೆ ಆಯುಕ್ತ ಜಿ. ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.