ಸಾಮೂಹಿಕ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ತನಿಖೆಗೆ ಸಹಕಾರ ನೀಡುತ್ತಿಲ್ಲ; ಸಚಿವ ಎಸ್.ಟಿ.ಸೋಮಶೇಖರ್

ಸಾಮೂಹಿಕ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ತನಿಖೆಗೆ ಸಹಕಾರ ನೀಡುತ್ತಿಲ್ಲ; ಸಚಿವ ಎಸ್.ಟಿ.ಸೋಮಶೇಖರ್

ಸಾಮೂಹಿಕ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ತನಿಖೆಗೆ ಸಹಕಾರ ನೀಡುತ್ತಿಲ್ಲ; ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿರುವ ಸಂತ್ರಸ್ತೆ ತನಿಖೆಗೆ ಸಹಕಾರ ನೀಡುತ್ತಿಲ್ಲವೆಂದು ಪೊಲೀಸರು ಹೇಳಿದ್ದಾರೆ. ತನಿಖೆಗೆ ಸಹಕಾರ ಅಗತ್ಯವಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಮೈಸೂರಿನಲ್ಲಿ ಅಪರಾಧ ಪ್ರಕರಣಗಳು ಹಾಗೂ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವರು ಸಭೆ ನಡೆಸಲಿದ್ದಾರೆ. ಈ ವೇಳೆ ಎಲ್ಲಾ ವಿಚಾರವನ್ನೂ ಅವರ ಗಮನಕ್ಕೆ ತಂದಿದ್ದೇನೆ. ಸಂತ್ರಸ್ತೆಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ಯಾರನ್ನೂ ಭೇಟಿಯಾಗಲ್ಲ ಎಂದು ಸಂತ್ರಸ್ತೆ ಪೋಷಕರು ಹೇಳಿದ್ದಾರೆ. ಸಂತ್ರಸ್ತೆ ಯಾರನ್ನೂ ಭೇಟಿಯಾಗಲ್ಲವೆಂದು ಪೋಷಕರು ಪತ್ರ ನೀಡಿದ್ದಾರೆ. ಆದರೆ, ಆರೋಪಿಗಳ ಪತ್ತೆಗೆ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ ಎಂದರು.