ವಿಜಯಪುರ ಜಿಲ್ಲೆಯಲ್ಲಿ ಮಾದಿಗ ಸಮುದಾಯದ ಬೃಹತ್ ಸಮಾವೇಶ
ದಿನಾಂಕ 27-10-2021 ರಂದು ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ವೆಂಕಟೇಶ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಮಾದಿಗ ಸಮುದಾಯದ ಬೃಹತ್ ಸಮಾವೇಶವನ್ನು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾದ ಶ್ರೀ ಎ. ನಾರಾಯಣಸ್ವಾಮಿ, ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಹೆಚ್. ಹನುಮಂತಪ್ಪ ಅವರು ಉದ್ಘಾಟಿಸಿ ಮಾತನಾಡಿದರು. ಸಮವೇಶಕ್ಕೂ ಮುನ್ನ ಸಿಂದಗಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನ ಮಾಡಲಾಯಿತು.ಸಮಾವೇಶದಲ್ಲಿ ದಲಿತರ ಪರವಾಗಿ ಕಳಕಳಿ ಹೊಂದಿರುವ ಬಿಜೆಪಿ ಪಕ್ಷ ಮತ್ತು ಅಭ್ಯರ್ಥಿಯಾಗಿರು ಶ್ರೀ ರಮೇಶ್ ಭೂಸನೂರು ಅವರ ಪರವಾಗಿ ಮತಯಾಚಿಸಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ಎಸ್ಸಿ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಜಗದೀಶ್,ಯಾದಗಿರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಶ್ರೀ ದೇವೇಂದ್ರನಾಥ್, ಮಹಿಳಾ ಎಸ್ಸಿ ಮೋರ್ಚಾದ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಶ್ರೀಮತಿ ಗೀತಾ ಮಂಗನೂರು, ಮಹಿಳಾ ಮೋರ್ಚಾದ ಜಿಲ್ಲಾ ಸದಸ್ಯರಾದ ಗಂಗಾಬಾಯಿ, ಎಸ್ಸಿ ಮೋರ್ಚಾದ ತಾಲೂಕು ಅಧ್ಯಕ್ಷರಾದ ಶ್ರೀ ಸಿದ್ದು ಪೂಜಾರಿ, ಜಿಪಂ ಸದಸ್ಯರಾದ ಶ್ರೀ ಶ್ರೀನಿವಾಸ್ ಹಾಗೂ ಇತರರು ಹಾಜರಿದ್ದರು.