ವಿನಯ್ ಕುಲಕರ್ಣಿ ಭೇಟಿ

ಹಾನಗಲ್ ಉಪಚುನಾವಣೆ ನಿಮಿತ್ತ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಶಿಗ್ಗಾವಿಯ ಗಂಗಿಬಾವಿ ಸುಕ್ಷೇತ್ರದಲ್ಲಿ ತಾಲೂಕ ಅಲ್ಪಸಂಖ್ಯಾತರ ಘಟಕದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಬಾಬಾರ ಬಾವಾಜಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹನುಮಂತಪ್ಪ ಬಂಡಿವಡ್ಡರ ಹಿರಿಯ ಮುಖಂಡ ನೂರ್ ಅಹಮದ್ ಮಾಳಗಿ ಮುಖಂಡ ಶ್ರೀಕಾಂತಗೌಡ ದುಂಡಿ ಗೌಡ್ರು ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಣ್ಣಪ್ಪ ಲಮಾಣಿ ಮಾಜಿ ಜಿಪಂ ಸದಸ್ಯ ರಮೇಶ ದುಗ್ಗತ್ತಿ ತಾಲೂಕ ಕಾಂಗ್ರೆಸ್ ವಕ್ತಾರ ಮಂಜುನಾಥ್ ಮಣ್ಣಣ್ಣವರ ಸೇರಿದಂತೆ ಅನೇಕ ಚುನಾಯಿತ ಪ್ರತಿನಿಧಿಗಳು ಮುಖಂಡರು ಉಪಸ್ಥಿತರಿದ್ದರು. ಇದೆ ಸಂದರ್ಭದಲ್ಲಿ ಮಾಜಿ ಶಾಸಕರಾದ ಅಜ್ಜಂಪೀರ್ ಖಾದ್ರಿ ಅವರ ಮನೆಗೆ ಹೋಗಿ ಭೇಟಿ ನೀಡಿ ಅವರ ಆರೋಗ್ಯ ಕ್ಷೇಮ ವಿಚಾರಿಸುವದಾಗಿ ತಿಳಿಸಿದರು.