ಮಂಡ್ಯದಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಾಳೆ

ಮಂಡ್ಯದಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಾಳೆ

ಬೆಂಗಳೂರು: ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ಇದೇ 25ರಂದು ಮಂಡ್ಯ ನಗರದಲ್ಲಿ ನಡೆಯಲಿದೆ.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್‌ ಕುಮಾರ್ ಗೌತಮ್‌ ಸಭೆಯನ್ನು ಉದ್ಘಾಟಿಸಲಿದ್ದಾರೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ.

ಚಿತ್ರದುರ್ಗದಲ್ಲಿ ನಡೆದ ಪದಾಧಿಕಾರಿಗಳ ಸಭೆಯ ನಂತರದ ಸಂಘಟನಾತ್ಮಕ ಚಟುವಟಿಕೆಗಳು, ಕೋವಿಡ್‌ 3ನೇ ಅಲೆಯ ಕುರಿತ ತಯಾರಿ, ಮಹಾನಗರ ಪಾಲಿಕೆಗಳ ಚುನಾವಣೆ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಕುರಿತು ಚರ್ಚಿಸಲಾಗುವುದು ಎಂದು ರಾಜ್ಯ ಮುಖ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.