ಸಿಎಂ ನಿವಾಸಕ್ಕೆ ಭೇಟಿ ನೀಡುವಾಗ ಮೊಬೈಲ್ ಬಳಕೆ ನಿಷೇಧ
ಸಿಎಂ ನಿವಾಸಕ್ಕೆ ಭೇಟಿ ನೀಡುವಾಗ ಮೊಬೈಲ್ ಬಳಕೆ ನಿಷೇಧ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗುವ ಸಾರ್ವಜನಿಕರ ಮೊಬೈಲ್ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ.
ಆರ್‌ಟಿ ನಗರದಲ್ಲಿರುವ ಅವರ ನಿವಾಸದ ಮುಂದೆ ಫಲಕವನ್ನು ಹಾಕಲಾಗಿದ್ದು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಬರುವ ಸಾರ್ವಜನಿಕರು ಮೊಬೈಲ್ ಬಳಸಬಾರದೆಂದು ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ. ಒಂದು ವೇಳೆ ಸಾರ್ವಜನಿಕರು ಮೊಬೈಲ್ ಬಳಕೆ ಮಾಡಿದರೆ ಅಂಥವರಿಗೆ ಭೇಟಿಗೆ ಅವಕಾಶವನ್ನೇ ಮಾಡಿಕೊಡುವುದಿಲ್ಲ ಎಂದು ಎಚ್ಚರಿಸಲಾಗಿದೆ.
ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಬರುವವರು ತಮ್ಮ ಕೆಲಸ ಮುಗಿಸಿಕೊಂಡು ಹೋಗುವ ಬದಲು ಸೆಲ್ಫಿಗೆ ತೆಗೆಯುವುದು, ಮನೆಯ ಸುತ್ತಮುತ್ತ ಫೋಟೋ ತೆಗೆಯುವುದು ಸೇರಿದಂತೆ ನಾನಾ ರೀತಿಯ ತೊಂದರೆ ನೀಡಿದ್ದರು. ಇದನ್ನು ತಪ್ಪಿಸುವ ಸಲುವಾಗಿ ಸಾರ್ವಜನಿಕರು ಭೇಟಿಗೆ ಬರುವ ಸಂದರ್ಭದಲ್ಲಿ ಮೊಬೈಲ್ ಬಳಕೆ ಮಾಡಬಾರದೆಂದು ಸೂಚಿಸಲಾಗಿದೆ.