ಮನಿ ಲಾಂಡರಿಂಗ್ ಪ್ರಕರಣ: ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ, ಪತ್ನಿಗೆ ಇಡಿ ಸಮನ್ಸ್

ಮನಿ ಲಾಂಡರಿಂಗ್ ಪ್ರಕರಣ: ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ, ಪತ್ನಿಗೆ ಇಡಿ ಸಮನ್ಸ್

ಮನಿ ಲಾಂಡರಿಂಗ್ ಪ್ರಕರಣ: ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ, ಪತ್ನಿಗೆ ಇಡಿ ಸಮನ್ಸ್

ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿಗೆ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಅಭಿಷೇಕ್ ಬ್ಯಾನರ್ಜಿ, ತೃಣಮೂಲ ಕಾಂಗ್ರೆಸ್ (TMC) ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ.

ಸೆಪ್ಟೆಂಬರ್ 6 ರಂದು ಪ್ರಕರಣದ ತನಿಖಾ ಅಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್ ನೀಡಿದ್ದು, ಅವರ ಪತ್ನಿ ರುಜಿರಾಗt ಇದೇ ರೀತಿಯ ಸಮನ್ಸ್ ಕಳುಹಿಸಲಾಗಿದೆ.

ಮುಂದಿನ ತಿಂಗಳು ಬೇರೆ ಬೇರೆ ದಿನಾಂಕಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಪ್ರಕರಣಕ್ಕೆ ಸಂಬಂಧಪಟ್ಟ ಕೆಲವರಿಗೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2020ರ ನವೆಂಬರ್‌ನಲ್ಲಿ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ಗಣಿಗಳಿಗೆ ಸಂಬಂಧಿಸಿದ ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಅಭಿಷೇಕ್ ಬ್ಯಾನರ್ಜಿ ಅವರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಎಫ್‌ಐಆರ್ ದಾಖಲಿಸಿತ್ತು. ನಂತರ ಪಿಎಂಎಲ್‌ಎ ಕಾಯ್ದೆ ಅಡಿ ಟಿಎಂಸಿ ನಾಯಕನ ವಿರುದ್ಧ ಇಡಿ ಕೇಸ್ ದಾಖಲಿಸಿದೆ.