ಸಾಮಾಜಿಕ ಕಾರ್ಯಕರ್ತ ಬಸವರಾಜ ಕೊರವರಗೆ ಮಾತೃ ವಿಯೋಗ
ಧಾರವಾಡ ಸಾಮಾಜಿಕ ಕಾರ್ಯಕರ್ತ ಬಸವರಾಜ ಕೊರವರ ಅವರ ತಾಯಿ ನಾಗಮ್ಮ ಹನುಮಂತಪ್ಪ ಕೊರವರ (63) ಗುರುವಾರ ವಿಧಿವಶರಾದರು. ಅವರು ಕಡಿಮೆ ರಕ್ತದೊತ್ತಡ ದಿಂದಾಗಿ ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದರು. ಅವರಿಗೆ ಬಸವರಾಜ ಕೊರವರ ಸೇರಿ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧುಗಳು ಇದ್ದಾರೆ. ಅವರ ಅಂತ್ಯಕ್ರಿಯೆ ಗುರುವಾರ ಸಂಜೆ 5 ಗಂಟೆಗೆ ಧಾರವಾಡದ ಹೊಸ ಬಸ್ ನಿಲ್ದಾಣದ ಸಮೀಪದ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.