ಫೇಸ್ ಬುಕ್ ಖಾತೆ ದುರುಪಯೋಗ : ಸೈಬರ್ ಕ್ರೈಂಗೆ ದೂರು ನೀಡಲು ಮುಂದಾದ ಸಚಿವ ಮುರುಗೇಶ್ ನಿರಾಣಿ

ಫೇಸ್ ಬುಕ್ ಖಾತೆ ದುರುಪಯೋಗ : ಸೈಬರ್ ಕ್ರೈಂಗೆ ದೂರು ನೀಡಲು ಮುಂದಾದ ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಫೇಸ್ ಬುಕ್ ನಲ್ಲಿ ನಖಲಿ ಖಾತೆಯನ್ನು ತೆರೆದು ರಿಕ್ವೆಸ್ಟ್ ಕಳುಹಿಸಿ ಹಣ ಕೇಳುತ್ತಿರುವ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇದರ ಬೆನ್ನಲ್ಲೇ ಸಚಿವ ಮಧ್ಯಮ ಗಾತ್ರ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರ ಫೇಸ್ ಬುಕ್ ಖಾತೆಯನ್ನು ಕಿಡಿಗೇಡಿಗಳು ದುರುಪಯೋಗ ಮಾಡಿಕೊಂಡಿದ್ದಾರೆ.

ಈ ಕುರಿತು ತಿಳಿಸಿರುವ ಸಚಿವ ನಿರಾಣಿ, ಕೆಲವು ಕಿಡಿಗೇಡಿಗಳು ಫೇಸ್ ಬುಕ್ ನಲ್ಲಿ ತಮ್ಮ ಖಾತೆಗೆ ಕನ್ನ ಹಾಕಿ ದುರ್ಬಳಕೆ ಮಾಡಿಕೊಂಡು ಹಣದ ಸಹಾಯ ಕೇಳುತ್ತಿರುವುದು ಗಮನಕ್ಕೆ ಬಂದಿದೆ. ತಾವು ಹಣದ ಸಹಾಯ ಕೇಳಿತ್ತಿದ್ದೇನೆಂದು ಸುಳ್ಳು ವದಂತಿ ಹಬ್ಬಿಸಿದ್ದು, ತಮ್ಮ ಗಮನಕ್ಕೆಬಂದಿದ್ದು, ಇದು ಸತ್ಯಕ್ಕೆ ದೂರವಾಗಿದೆ. ಯಾರೂ ನಂಬಿ ವಂಚನೆಗೆ ಒಳಗಾಗಬೇಡಿ ಎಂದು ಮನವಿ ಮಾಡಿದ್ದಾರೆ. ಅಲ್ಲದೇ, ಈ ಬಗ್ಗೆ ಸೈಬರ್ ಕ್ರೈಂಗೆ ದೂರು ನೀಡುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ…