ಮೈಸೂರು ವಿದ್ಯಾರ್ಥಿನಿ ಮೇಲೆ ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರ

ಮೈಸೂರು ವಿದ್ಯಾರ್ಥಿನಿ ಮೇಲೆ ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರ

ಮೈಸೂರು : ನಗರದ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಮೈಸೂರಿನ ಹೆಲಿಪ್ಯಾಡ್ ಬಳಿಯ ವಾಟರ್ ಟ್ಯಾಂಕ್ ನ ಗುಡ್ಡದ ಬಳಿ ಗ್ಯಾಂಗ್ ರೇಪ್ ನಡೆದಿದೆ.

ವಿದ್ಯಾರ್ಥಿನಿಯು ಸ್ನೇಹಿತನ ಜೊತೆ ಬೆಟ್ಟಕ್ಕೆ ತೆರಳಿದ್ದ ವೇಳೆ ಯುವಕರ ತಂಡ ಸಾಮೂಹಿಕ ಅತ್ಯಾಚಾರ ಎಸಗಿದೆ. ಸದ್ಯ ವಿದ್ಯಾರ್ಥಿನಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಘಟನೆ ಕುರಿತು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.