ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳ ಪತ್ತೆಗೆ ಸಹಾಯ ಮಾಡಿದ ಬಸ್ ಟಿಕೆಟ್

ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳ ಪತ್ತೆಗೆ ಸಹಾಯ ಮಾಡಿದ ಬಸ್ ಟಿಕೆಟ್
ಬೆಂಗಳೂರು ಹಾಗೂ ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಘಟನೆ ನಡೆದು 85 ಗಂಟೆಗಳ ಬಳಿಕ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ತಮಿಳುನಾಡಿನ ಸತ್ಯಮಂಗಲದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ಪತ್ತೆಹಚ್ಚುವಲ್ಲಿ ಪೊಲೀಸರಿಗೆ ದೊಡ್ಡ ಸಹಾಯ ನೀಡುದ್ದು ಬಸ್ ಟಿಕೆಟ್ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗ್ಯಾಂಗ್ ರೇಪ್ ನಡೆದಿದ್ದ ಸ್ಥಳದಲ್ಲಿ ಸಿಕ್ಕಿದ್ದ ಬಸ್ ಟಿಕೆಟ್ ಆರೋಪಿಗಳ ಪತ್ತೆ ಜಾಡು ಹಿಡಿಯಲು ಸಹಾಯ ಮಾಡಿತ್ತು.