ಮೈಸೂರು ದರೋಡೆ ಪ್ರಕರಣ: 6 ಮಂದಿ ಬಂಧನ

ಮೈಸೂರು ದರೋಡೆ ಪ್ರಕರಣ: 6 ಮಂದಿ ಬಂಧನ

ಮೈಸೂರು ದರೋಡೆ ಪ್ರಕರಣ: 6 ಮಂದಿ ಬಂಧನ

ಮೈಸೂರು: ನಗರದ ಚಿನ್ನಾಭರಣ ಅಂಗಡಿಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ತಿಳಿಸಿದ್ದಾರೆ.
ಇಲ್ಲಿನ ಅಮೃತ್‌ ಜ್ಯುವೆಲರ್ಸ್‌ನಲ್ಲಿ ದರೋಡೆ ನಡೆದಿತ್ತು. ಈ ವೇಳೆ ನಡೆದ ಶೂಟೌಟ್‌ನಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು 6 ಮಂದಿಯನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ರಾಜಸ್ತಾನ ಹಾಗೂ ಜಮ್ಮು ಮತ್ತು ಕಾಶ್ಮೀರದಿಂದ ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖಾ ತಂಡಕ್ಕೆ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ.
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ತನಿಖೆ ಮುಂದುವರಿದಿದೆ. ಈ ಹಂತದಲ್ಲಿ ಯಾವುದೇ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಪ್ರವೀಣ್‌ ಸೂದ್‌ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.