ಮೈಸೂರು ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್; 7ನೇ ಆರೋಪಿ ಬಂಧನ

ಮೈಸೂರು ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್; 7ನೇ ಆರೋಪಿ ಬಂಧನ

ಮೈಸೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮೈಸೂರು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣದ 7ನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.

ಆಗಸ್ಟ್ 24ರಂದು ಸಂಜೆ ಮೈಸೂರಿನ ಲೀಲಾದ್ರಿ ಗುಡ್ಡ ಪ್ರದೇಶದಲ್ಲಿ ನಡೆದಿದ್ದ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ತಮಿಳುನಾಡು ಮೂಲದ 6 ಆರೋಪಿಗಳನ್ನು ಬಂಧಿಸಿದ್ದರು. ಬಂಧಿತರಲ್ಲಿ ಓರ್ವ ಬಾಲಾರೋಪಿಯಾಗಿದ್ದು, ಆರೋಪಿಗಳು ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದರು. ಆದರೆ ಪ್ರಕರಣದ 7ನೇ ಆರೋಪಿ ತಲೆಮರೆಸಿಕೊಂಡಿದ್ದ.

ಆತನಿಗಾಗಿ ಬಲೆ ಬೀಸಿದ್ದ ಮೈಸೂರು ಪೊಲೀಸರು ಇದೀಗ ತಮಿಳುನಾಡಿನಲ್ಲಿಯೇ 7ನೇ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.