ಆಂಧ್ರ ಪ್ರದೇಶದಲ್ಲಿ ಒಂದೇ ಕುಟುಂಬದ ಆರು ಜನ ನಿಗೂಢ ಸಾವು
ಗುಂಟೂರು: ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ತಾಲೂಕಿನ ಲಂಕವಾನಿದಿಬ್ಬ ಗ್ರಾಮದಲ್ಲಿ ಒಂದೇ ಕುಟುಂಬದ ಆರು ಮಂದಿ ನಿಗೂಢವಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಮೃತಪಟ್ಟವರನ್ನು ರಾಮಮೂರ್ತಿ, ಕಿರಣ್, ಮನೋಜ್, ವಂಡಬೋ, ಮಹೇಂದ್ರ, ಒಡಿಶಾ ನಿವಾಸಿ ನವೀನ್ ಎಂದು ಗುರುತಿಸಲಾಗಿದೆ.
ರಾತ್ರಿ ಮಲಗಿದ್ದ ವೇಳೆ ಕರೆಂಟ್ ತಂತಿ ಶೆಡ್ ಮೇಲೆ ಬಿದ್ದ ಪರಿಣಾಮ ಸಾವು ಸಂಭವಿಸಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ. ಆದರೆ ಶಾರ್ಟ್ ಸರ್ಕ್ಯೂಟ್ ಆಗಿರುವ ಬಗ್ಗೆ ಯಾವುದೇ ಲಕ್ಷಣ ಕಂಡು ಬಂದಿಲ್ಲ ಎಂದು ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳ ತಿಳಿಸಿದ್ದಾರೆ.
ಆರು ಜನ ಬೆಂಕಿ ತಗುಲಿ ಮೃತಪಟ್ಟಿದ್ದು, ಆದರೆ ಆ ಬೆಂಕಿ ಬಂದದ್ದು ಹೇಗೆ ಎಂಬ ಬಗ್ಗೆ ಇದುವರೆಗೂ ನಿಗೂಢವಾಗಿಯೇ ಉಳಿದಿದೆ. ಇನ್ನು ಕುಟುಂಬದವರು ಅನ್ಯೋನ್ಯವಾಗಿದ್ದುದರಿಂದ ಇದು ಆತ್ಮಹತ್ಯೆ ಅಥವಾ ಕೊಲೆಯೂ ಅಲ್ಲ ಎಂದು ತಿಳಿದು ಬಂದಿದೆ. ಸಾವಿನ ಕಾರಣವನ್ನು ಪತ್ತೆ ಹಚ್ಚುವಲ್ಲಿ ತನಿಖಾಧಿಕಾರಿಗಳು ತೊಡಗಿಕೊಂಡಿದ್ದಾರೆ.