ಮಧ್ಯಮ ಹಂತದ ಪೆÇಲೀಸ್ ಅಧಿಕಾರಿಗಳಿಗೆ ಎನ್‍ಡಿಎ ಮಾದರಿ ತರಬೇತಿ: ಸಿಎಂ
ಹುಬ್ಬಳ್ಳಿ
ಹುಬ್ಬಳ್ಳಿಯ ಬಾಣತಿಕಟ್ಟೆಯಲ್ಲಿ ಕಸಬಾ ಪೇಟೆ ಪೆÇಲೀಸ್ ಠಾಣೆ , ದಕ್ಷಿಣ ಸಂಚಾರಿ ಠಾಣೆ, ಆಳ್ನಾವರ ಪೆÇಲೀಸ್ ಠಾಣೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆಡಳಿತ ಕಛೇರಿ ಮತ್ತು 36 ಪೆÇಲೀಸ್ ವಸತಿ ಗೃಹಗಳ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಿದರು. ಈ ವೇಳೆ ಮಾತನಾಡಿ, ಪೆÇಲೀಸ್ ಅಪರಾಧ ಪ್ರಕರಣಗಳ ತ್ವರಿತ ಪತ್ತೆ ಮತ್ತು ತನಿಖೆಯ ವೇಗ ಹೆಚ್ಚಿಸಲು ರಾಜ್ಯದ ಕಲಬುರ್ಗಿ,ಹುಬ್ಬಳ್ಳಿ-ಧಾರವಾಡ ,ಮೈಸೂರು ಹಾಗೂ ಇತರ ಪ್ರಮುಖ ನಗರಗಳಲ್ಲಿ ಒಟ್ಟು ಆರು ವಿಧಿವಿಜ್ಞಾನ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. ಆಫೀಸರ್ ಆನ್ ಕ್ರೈಮ್ ಸೀನ್ ಅಧಿಕಾರಿಗಳನ್ನು ನೇಮಿಸಿ ಉನ್ನತ ಮಟ್ಟದ ಎಫ್ ಎಸ್ ಎಲ್ ತರಬೇತಿ ನೀಡಿ ಅಪರಾಧ ಕೃತ್ಯಗಳ ಸಾಕ್ಷ್ಯಾಧಾರ ನಾಶಕ್ಕೆ ಅವಕಾಶವಿಲ್ಲದೇ ಮಹಜರು ನಡೆಸಿ, ಪ್ರಯೋಗಾಲಯಕ್ಕೆ ಕಳುಹಿಸುವ ಕ್ರಮಗಳ ಸ್ಪಷ್ಟ ತಿಳುವಳಿಕೆ ನೀಡಲಾಗುವುದು. ಪುಣೆಯ ಕಡಕ್‍ವಾಸ್ಲಾದಲ್ಲಿರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ(ಎನ್.ಡಿ.ಎ) ತರಬೇತಿ ಕೇಂದ್ರದ ಮಾದರಿಯಲ್ಲಿ ರಾಜ್ಯದ ಮಧ್ಯಮ ಹಂತದ ಪೆÇಲೀಸ್ ಅಧಿಕಾರಿಗಳ ತರಬೇತಿಗಾಗಿ ಪ್ರತ್ಯೇಕ ಕೇಂದ್ರ ಸ್ಥಾಪಿಸಲಾಗುವುದು ಎಂದರು.
ಗೃಹ ಸಚಿವರಾದ ಅರಗ ಜ್ಞಾನೇಂದ್ರ ಮಾತನಾಡಿ, ಜಿಲ್ಲೆಯಲ್ಲಿ ಮುಂದಿನ ಆರಂಭಿಸುವ ಯೋಜನೆಗಳ ಬಗ್ಗೆ ವಿವರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಪ್ರಸಾದ ಅಬ್ಬಯ್ಯ ವಹಿಸಿದ್ದರು. ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ,ಸಿ .ಎಂ.ನಿಂಬಣ್ಣವರ, ಕುಸುಮಾವತಿ ಶಿವಳ್ಳಿ, ವಿಧಾನಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ಕರ್ನಾಟಕ ಕೃಷಿ ಉತ್ಪನ್ನಗಳ ಸಂಸ್ಕರಣ ಹಾಗೂ ರಫ್ತು ನಿಗಮದ ಅಧ್ಯಕ್ಷ ಎಸ್.ಐ.ಚಿಕ್ಕನಗೌಡ್ರ, ರಾಜ್ಯ ರೇμÉ್ಮೀ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ವಾಕರಸಾಸಂ ಅಧ್ಯಕ್ಷ ವಿ.ಎಸ್.ಪಾಟೀಲ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲಬುರ್ಗಿ, ಉತ್ತರ ವಲಯ ಐಜಿಪಿ ಎನ್.ಸತೀಶಕುಮಾರ, ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ, ಹುಬ್ಬಳ್ಳಿ ಧಾರವಾಡ ಪೆÇಲೀಸ್ ಆಯುಕ್ತ ಲಾಭೂರಾಮ್,ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಪಿ.ಕೃಷ್ಣಕಾಂತ್ ಮತ್ತಿತರರು ಉಪಸ್ಥಿತರಿದ್ದರು.