ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರೈಸಿದ ನಳಿನ್, ಸಿಎಂ ಬಸವರಾಜ ಬೊಮ್ಮಾಯಿರಿಂದ ಶುಭ ಹಾರೈಕೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವರು ಇಂದಿಗೆ ಎರಡು ವರ್ಷ ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ನಳಿನ್ ಗೆ ಶುಭಹಾರೈಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಬಸವರಾಜ ಬೊಮ್ಮಾಯಿ, ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದೀರಿ. ಅದಕ್ಕಾಗಿ ಹಾರ್ದಿಕ ಅಭಿನಂದನೆಗಳು ಎಂದಿದ್ದಾರೆ.
ಅಲ್ಲದೆ, ಮುಂದಿನ ದಿನಗಳಲ್ಲಿ ತಮ್ಮ ನೇತೃತ್ವದಲ್ಲಿ ಪಕ್ಷ ಇನ್ನಷ್ಟು ಬಲಗೊಳ್ಳಲಿ. ಪಕ್ಷ ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಷಿ ಆಗಲಿ ಎಂದು ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ.