ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈ ವರ್ಷದಿಂದಲೇ ಅನುಷ್ಠಾನಗೊಳಿಸಲಾಗುವುದು ಕುಲಸಚಿವ ಎಂ ಕೊಟ್ರೇಶ್ | Bangalore |

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈ ವರ್ಷದಿಂದಲೇ ಅನುಷ್ಠಾನಗೊಳಿಸಲಾಗುವುದು ಎಂದು ಕುಲಸಚಿವ ಎಂ ಕೊಟ್ರೇಶ್ ಬೆಂಗಳೂರಿನಲ್ಲಿಂದು ತಿಳಿಸಿದರು. ಇದೇ ಗುರುವಾರದಂದು ಬೆಂಗಳೂರಿನ ಗಾಯನ ಸಮಾಜ ಸಭಾಂಗಣದಲ್ಲಿ ಸಂಸ್ಕೃತ ಮಹೋತ್ಸವವನ್ನು ಆಯೋಜಿಸಲಾಗಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವ್ಯಾಸ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ರಾಮಚಂದ್ರ ಜಿ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದಾರೆ ಎಂದು ಅವರು ತಿಳಿಸಿದರು.