ರೈತರ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಕೆ ಇಲ್ಲ: ಸಚಿವ ಸುನೀಲ್

ರೈತರ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಕೆ ಇಲ್ಲ: ಸಚಿವ ಸುನೀಲ್
ಬೆಂಗಳೂರು: ರೈತರು ಕೃಷಿ ಉದ್ದೇಶಕ್ಕಾಗಿ ಬಳಸುವ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸಲಾಗುತ್ತದೆ ಎಂಬ ಬಗ್ಗೆ ಇಂಧನ ಸಚಿವ ವಿ.ಸುನೀಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ರೈತರ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸುವ ಚಿಂತನೆ ಇಲ್ಲ. ಪಂಪ್‌ಸೆಟ್ ಬಳಕೆಗೆ ಮೀಟರ್ ಅಳವಡಿಸುವ ಕುರಿತಾದ ಊಹಾಪೋಹಗಳನ್ನು ರೈತರು ನಂಬಬಾರದು ಎಂದು ಹೇಳಿದ್ದಾರೆ.
ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವ ಸಂಬAಧ, ಈಗಾಗಲೇ ಅಧಿಕಾರಿಗಳ ಸಭೆ ಕರೆದು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ. ಇಂಧನ ಇಲಾಖೆ ಆಳ ಮತ್ತು ಅಗಲಗಳನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತಿದ್ದೇನೆ. ಇಲಾಖೆಯನ್ನು ಜನಸ್ನೇಹಿಯನ್ನಾಗಿಸುವುದು ನಮ್ಮ ಮುಂದೆ ಇರುವ ಸವಾಲು ಎಂದು ತಿಳಿಸಿದ್ದಾರೆ.