ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಕ್ಕೆ ನಿರ್ಬಂಧ ಹೇರಲ್ಲ ಜಿಲ್ಲಾಧಿಕಾರಿ ಸ್ಪಷ್ಟನೆ | Hubli | DC | Covid 19 |
ಧಾರವಾಡದ ಎಸ್.ಡಿ.ಎಂ ಕಾಲೇಜಿನಲ್ಲಿ ಸೋಂಕು ಹೆಚ್ಚಳ ಹಿನ್ನಲೆಯಲ್ಲಿ ಜಿನ್ಯೂಂ ಸಿಕ್ವೇನ್ಸ್ ಟೆಸ್ಟ್ ಮಾಡಲು ಸ್ಯಾಂಪಲ್ ಕಳುಹಿಸಿ ಕೊಡಲಾಗಿತ್ತು. ಟೆಸ್ಟ್ ವರದಿ ಕಳೆದ ರಾತ್ರಿ ಬಂದಿದೆ. ಯಾರಿಗೂ ಪಾಸಿಟಿವ್ ಬಂದಿಲ್ಲ. ಜನರು ಆತಂಕ ಪಡಬಾರದು. ಫಸ್ಟ್ ಡೋಸ್ 90% ಲಸಿಕಾಕರಣ ಆಗಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಯ ಸುತ್ತಲಿನ ಶಾಲಾ ಕಾಲೇಜುಗಳು ಮತ್ತೆ ನಾಳೆಯಿಂದ ಆರಂಭ ಮಾಡುತ್ತೇವೆ. ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಗಳಿಗೆ ನಿರ್ಬಂಧ ಹೇರಲ್ಲ. ನಿರ್ಬಂಧ ಹೇರಲು ಅವಕಾಶ ಇಲ್ಲ. ಧಾರವಾಡ ಜಿಲ್ಲೆಯಲ್ಲಿ ಪ್ರತಿನಿತ್ಯ ಸಾವಿರ ಜನರಿಗೆ ಟೆಸ್ಟ್ ಮಾಡುತ್ತಿದ್ದೇವೆ ಎಂದರು