ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಕಡಿತ ಇಲ್ಲ: ನಿರ್ಮಲಾ ಸೀತಾರಾಮನ್

ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಕಡಿತ ಇಲ್ಲ: ನಿರ್ಮಲಾ ಸೀತಾರಾಮನ್

ಪೆಟ್ರೋಲ್, ಡೀಸೆಲ್ ಅಬಕಾರಿ ಸುಂಕ ಕಡಿತ ಇಲ್ಲ: ನಿರ್ಮಲಾ ಸೀತಾರಾಮನ್

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಮಾಡುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

ತೈಲೋತ್ಪನ್ನಗಳ ದರ ಏರಿಕೆ ಹಿನ್ನಲೆಯಲ್ಲಿ ತಮಿಳುನಾಡು ಸರ್ಕಾರ ಅಬಕಾರಿ ಸುಂಕ ಕಡಿತ ಮಾಡಿದ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಕೂಡ ಅಬಕಾರಿ ಸುಂಕ ಕಡಿತ ಮಾಡಬೇಕು ಎಂಬ ಕೂಗು ಎದ್ದಿದ್ದು, ಆದರೆ ಇದಕ್ಕೆ ಕೇಂದ್ರ ಸರ್ಕಾರ ನಕಾರ ವ್ಯಕ್ತಪಡಿಸಿದೆ.

ಈ ಹಿಂದೆ ಪೆಟ್ರೋಲ್ ಮತ್ತು ಡೀಸೆಲ್‌ಗೆ ನೀಡಿದ್ದ ಸಬ್ಸಿಡಿಗೆ ಬದಲಾಗಿ ಪಾವತಿ ಮಾಡಬೇಕಿರುವ ಮೊತ್ತವು ಸುಂಕ ಕಡಿತಕ್ಕೆ ಅವಕಾಶ ಕೊಡುತ್ತಿಲ್ಲ.. ಎಂದು ಹೇಳುವ ಮೂಲಕ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಧ್ಯಕ್ಕೆ ಪೆಟ್ರೋಲ್, ಡೀಸೆಲ್ ಸುಂಕ ಕಡಿತ ಇಲ್ಲ ಎಂದು ಹೇಳಿದ್ದಾರೆ.

'ತೈಲ ಬಾಂಡ್‌ಗೆ ಸಂಬAಧಿಸಿದ ಮೊತ್ತವನ್ನು ಪಾವತಿಸುವ ಹೊರೆ ಇಲ್ಲದಿದ್ದರೆ ನಾನು ಈಗ ತೈಲೋತ್ಪನ್ನಗಳ ಮೇಲಿನ ಎಕ್ಸೈಸ್ ಸುಂಕವನ್ನು ಕಡಿಮೆ ಮಾಡುವ ಸ್ಥಿತಿಯಲ್ಲಿ ಇರುತ್ತಿದ್ದೆ.. ತೈಲ ಬಾಂಡ್ ವಿತರಿಸುವ ಮೂಲಕ ಹಿಂದಿನ ಸರ್ಕಾರವು ನಮ್ಮ ಕೆಲಸವನ್ನು ಕಷ್ಟಕರವಾಗಿಸಿದೆ. ತೈಲ ಬಾಂಡ್‌ಗಳಿಗೆ ಭಾರಿ ಮೊತ್ತ ತೆಗೆದಿರಿಸಬೇಕಾಗಿದೆ ಎಂದು ಅವರು ವಿವರಿಸಿದರು.

ಅಂತೆಯೇ ರಾಜ್ಯ ಸರ್ಕಾರಗಳು ಒಪ್ಪಿಗೆ ನೀಡಿದರೆ ಪೆಟ್ರೋಲ್ ಮತ್ತು ಡೀಸೆಲ್‌ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬಹುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.