ನೋ ವ್ಯಾಕ್ಸಿನೇಷನ್‌ ನೋ ರೇಷನ್ ಅಧಿಕಾರಿಗಳ ಆದೇಶ ತಪ್ಪು ಎಂದ ಸಿಎಂ ಬೊಮ್ಮಾಯಿ

ನೋ ವ್ಯಾಕ್ಸಿನೇಷನ್‌  ನೋ ರೇಷನ್   ಅಧಿಕಾರಿಗಳ ಆದೇಶ ತಪ್ಪು ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಕೋವಿಡ್ ಲಸಿಕೆ ಪಡೆಯದವರಿಗೆ ಪಡಿತರ, ಪಿಂಚಣಿ ಸಿಗುವುದಿಲ್ಲ ಎಂಬ ಆದೇಶ ಹೊರಡಿಸಿದ್ದ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶವನ್ನು ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ ಮಾತನಾಡಿದ ಬೊಮ್ಮಾಯಿ ಅವರು, ಕೊವೀಡ್ ಲಸಿಕೆ ಪಡೆಯದಿದ್ದರೆ ಪಡಿತರ ನೀಡುವುದಿಲ್ಲ ಅನ್ನೋದು ತಪ್ಪು, ಜನರ ಮನವೊಲಿಸಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಮಾಡಬೇಕೆಂದು ಹೇಳಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಕೊರೊನಾ ಲಸಿಕೆ ವೇಗ ಹೆಚ್ಚಿಸಲು ಚಾಮರಾಜನಗರ ಜಿಲ್ಲಾಡಳಿತ ವಿಭಿನ್ನ ಅಭಿಯಾನ ಆರಂಭಿಸಿದ್ದು, ವ್ಯಾಕ್ಸಿನೇಷನ್ ಪ್ರಮಾಣಪತ್ರ ತಂದ್ರೆ ಮಾತ್ರ ಪಡಿತರ ವಿತರಣೆ ಮಾಡುವಂತೆ ನ್ಯಾಯಬೆಲೆ ಅಂಗಡಿಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದರು ಎಂದು ಹೇಳಲಾಗುತ್ತಿದೆ. ಈ ಆದೇಶ ಹಲವು ಟೀಕೆಗಳಿಗೆ ಎಡೆಮಾಡಿಕೊಟ್ಟಿದೆ.