ಕೊಪ್ಪಳ ಜಿಲ್ಲೆಯಲ್ಲಿ ಶಾಲೆಗಳ ಆರಂಭ

ಇಂದಿನಿಂದ 1 ರಿಂದ 5 ನೇ ತರಗತಿ ಪ್ರಾರಂಭ ಹಿನ್ನಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿಯೂ ಮಕ್ಕಳನ್ನು ಶಿಕ್ಷಕರು ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಶಾಲೆಗಳನ್ಮು ತಳಿರು ತೋರಣ, ಬಲೂನ್ ಗಳಿಂದ ಸಿಂಗರಿಸಿ, ರಂಗೋಲಿ ಹಾಕಿ ಹಬ್ಬದ ವಾತಾವರಣ ನಿರ್ಮಾಣ ಮಾಡಲಾಗಿತ್ತು. ಮಕ್ಕಳನ್ನು ಸ್ವಾಗತಿಸಲು ಶಿಕ್ಷಕ ಸಿಬ್ಬಂದಿ ಅತ್ಯಂತ ಸಂಭ್ರಮದಿಂದ ಲವಲವಿಕೆಯಿಂದ ಬೆಳಗ್ಗೆಯಿಂದಲೇ ಸಜ್ಜಾಗಿ ನಿಂತಿದ್ದರು. ಶಾಲೆ ಆರಂಭವಾದ ಹಿನ್ನೆಲೆಯಲ್ಲಿ ಮಕ್ಕಳ ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಅತ್ಯಂತ ಖುಷಿಯಿಂದಲೇ ಕರೆದುಕೊಂಡು ಬಂದ ದೃಶ್ಯ ಸಾಮಾನ್ಯವಾಗಿತ್ತು. ಇನ್ನು ನಗರದ ಗಡಿಯಾರ ಕಂಬ ಸರ್ಕಲ್ ಬಳಿ ಇರುವ ಸಿಪಿಎಸ್ ಶಾಲೆಯಲ್ಲಿ ಮಕ್ಕಳ ಸ್ವಾಗತಕ್ಕಾಗಿ ಶಾಲೆಯಲ್ಲಿ ಹಬ್ಬದ ವಾತಾವರಣ ಸೃಷ್ಠಿಯಾಗಿತ್ತು. ಇನ್ನು ಶಾಲೆಗೆ ಬಂದ ಮಕ್ಕಳಿಗೆ ಪುಷ್ಪವೃಷ್ಠಿ ಮಾಡಿ ಬರಮಾಡಿಕೊಂಡರು. ಇನ್ನು 1 ರಿಂದ 5 ನೇ ತರಗತಿ ಶಾಲೆ ಆರಂಭದ ದಿನವೇ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೈಗೆ ಕಪ್ಪು ಪಟ್ಟಿ ಧರಿಸಿಕೊಂಡು ಶಿಕ್ಷಕರು ತರಗತಿಗೆ ಹಾಜರಾಗಿದ್ದಾರೆ. ವೃಂದ ಮತ್ತು ನೇಮಕಾತಿ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕರೆ ಹಿನ್ನೆಲೆಯಲ್ಲಿ ಕೊಪ್ಪಳದ ಸಿಪಿಎಸ್ ಶಾಲೆಯಲ್ಲಿ ಒಟ್ಟು 16 ಶಿಕ್ಷಕರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸಿದರು.