ಮಾಜಿ ಸಿಎಂ ಯಡಿಯೂರಪ್ಪ ಆಪ್ತರ ಮೇಲೆ ಐ.ಟಿ. ದಾಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಣ

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್ ಹಾಕಿದ್ದಾರೆ. ಮಾಜಿ ಸಿ.ಎಂ. ಯಡಿಯೂರಪ್ಪ ಆಪ್ತರ ಮೇಲೆ ಐ.ಟಿ ದಾಳಿ ಸಿದ್ದರಾಮಯ್ಯ ಕಾರಣ ಎಂದು ಅವರು ಆರೋಪಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೇ ಐ.ಟಿ ದಾಳಿಗೆ ಕಾರಣ. ಸಿದ್ದರಾಮಯ್ಯ ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಯಡಿಯೂರಪ್ಪ ಭೇಟಿ ಸಹ ಇದರ ಭಾಗವಾಗಿದೆ. ಹೇಗಾದರೂ ಸರಿಯೇ ಸಿದ್ದರಾಮಯ್ಯಗೆ ಅಧಿಕಾರ ಬೇಕು. ಈ ಭೇಟಿಯ ಬಗ್ಗೆ ಕೇಂದ್ರಕ್ಕೆ ಸಹ ಮಾಹಿತಿ ಸಿಕ್ಕಿದೆ. ಹೀಗಾಗಿ ಯಡಿಯೂರಪ್ಪ ಅವರನ್ನು ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಐ.ಟಿ ದಾಳಿ ನಡೆಸಲಾಗಿದೆ. ಈ ದಾಳಿಯ ಹಿಂದೆ ಸ್ಪಷ್ಟವಾದ ರಾಜಕೀಯ ಉದ್ದೇಶ ಇದೆ. ಈ ಬಗ್ಗೆ ಯಾವುದೇ ಅನುಮಾನ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾಜಿ ಸಿ.ಎಂ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.