ಎಲೆ ಮಲ್ಲಪ್ಪ ಶೆಟ್ಟಿ ಕೆರೆ ರಕ್ಷಣೆಗೆ ಸಮಿತಿ ರಚಿಸಲು ಆದೇಶ
ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡಿರುವ ಸಮಿತಿ ರಚಿಸಿ ಅ.22ರ ಒಳಗೆ ವರದಿ ಸಲ್ಲಿಸುವಂತೆ ಹಸಿರು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶ ಮಾಡಿದೆ. ಜಲ ಮೂಲಗಳನ್ನು ರಕ್ಷಿಸುವಲ್ಲಿ ಸರ್ಕಾರಿ ಸಂಸ್ಥೆಗಳ ವೈಫಲ್ಯದ ಬಗ್ಗೆ ಅಸಮಾಧಾನಗೊಂಡ ರಾಮಮೂರ್ತಿನಗರ ನಿವಾಸಿ ಜಗನ್ ಕುಮಾರ್ ಮತ್ತು ನಾಗರಿಕರು, ಕೊಳಚೆ ನೀರಿನಿಂದ ಕಲುಷಿತಗೊಳ್ಳುತ್ತಿರುವ ಎಲೆ ಮಲ್ಲಪ್ಪ ಶೆಟ್ಟಿ ಕೆರೆಯನ್ನು ರಕ್ಷಿಸಲು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಮೊರೆ ಹೋಗಿದ್ದಾರೆ. ಇವರ ಮನವಿಯ ಮೇರೆಗೆ, ಎನ್.ಜಿ.ಟಿ. ಈಗ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕೆರೆ ಪ್ರದೇಶ ಅತಿಕ್ರಮಣ, ಹೆಚ್ಚುತ್ತಿರುವ ಮಾಲಿನ್ಯದ ಮಟ್ಟ ನಿಯಂತ್ರಿಸಲು ಜಿಲ್ಲಾಧಿಕಾರಿ, ಬಿಬಿಎಂಪಿ ಜಂಟಿ ಆಯುಕ್ತರು, ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಇಲಾಖೆಗೆ ಪರಿಸರೇತರ ಚಟುವಟಿಕೆಗಳನ್ನು ಗಮನಿಸಲು ಮತ್ತು ಅಕ್ಟೋಬರ್ ಅಥವಾ ಅದಕ್ಕೂ ಮುನ್ನ ವರದಿ ಸಲ್ಲಿಸಲು ಸಮಿತಿ ರಚಿಸುವಂತೆ ನಿರ್ದೇಶನ ನೀಡಿದೆ.