ಬೊಮ್ಮಾಯಿ ನೇತೃತ್ವದ ನಮ್ಮ ಸರ್ಕಾರ ಅವಧಿ ಪೂರ್ಣಗೊಳಿಸಲಿದೆ : ಸಚಿವ ಗೋವಿಂದ ಕಾರಜೋಳ

ಬೊಮ್ಮಾಯಿ ನೇತೃತ್ವದ ನಮ್ಮ ಸರ್ಕಾರ ಅವಧಿ ಪೂರ್ಣಗೊಳಿಸಲಿದೆ : ಸಚಿವ ಗೋವಿಂದ ಕಾರಜೋಳ

ಬೆಳಗಾವಿ : ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ನಮ್ಮ ಸರ್ಕಾರ ಅವದಿ ಪೂರ್ಣಗೊಳಿಸಲಿದೆ. 2023 ರಲ್ಲಿಯೂ ನಮ್ಮ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಾಗಿನಿಂದ ಸಿದ್ದರಾಮಯ್ಯ ಭವಿಷ್ಯ ಹೇಳಿಯೇ ಹೇಳುತ್ತಿದ್ದಾರೆ. ಆದರೆ ಅವರ ಭವಿಷ್ಯ ಯಾವತ್ತೂ ಸತ್ಯವಾಗುವುದಿಲ್ಲ. ನಮ್ಮ ಸರ್ಕಾರ ಅವಧಿ ಪೂರ್ಣಗೊಳಿಸುತ್ತದೆ. 2023 ರಲ್ಲಿಯೂ ನಮ್ಮ ಸರ್ಕಾರ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುತ್ತೇವೆ ಎಂದರು.

ನೆಹರು-ವಾಜಪೇಯಿ ಹೆಸರಿನಲ್ಲಿ ನಡೆಯುತ್ತಿರುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಕಾರಜೋಳ, ಯಾರೇ ಆಗಲಿ ನಮ್ಮನ್ನು ಅಗಲಿ ಹೋಗಿರುವವರ ಬಗ್ಗೆ ಇಲ್ಲ ಸಲ್ಲದ ಮಾತುಗಳು ಆಡಬಾರದು. ಸಾರ್ವಜನಿಕ ಜೀವನದಲ್ಲಿ ಇರಬೇಕಾದರೆ ನಮ್ಮಿಂದ ಒಳ್ಳೆಯ ಕೆಲಸಗಳು ಆಗುತ್ತವೆ ಎಂದು ಹೇಳಿದ್ದಾರೆ.