ಕಾರಿನಲ್ಲಿ ಏಕಾಏಕಿ ಬೆಂಕಿ: ಉದ್ವಿಗ್ನ ವಾತಾವರಣ ನಿರ್ಮಾಣ

ಬೆಂಗಳೂರು: ಸದಾಶಿವನಗರದ ಕಾವೇರಿ ಥಿಯೇಟರ್ ಜಂಕ್ಷನ್ ಬಳಿ ಖಾಸಗಿ ಕಂಪನಿ ಉದ್ಯೋಗಿ ಚಲಾಯಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ಕಾರಿನ ಬ್ಯಾಟರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅಪಘಾತಕ್ಕೆ ಕಾರಣವಾಗಿದೆ ಎಂದು ಶಂಕಿಸಲಾಗಿದೆ. ಕಾರನ್ನು ಚಲಾಯಿಸುತ್ತಿದ್ದ ಮಾಲೀಕ ಕೆ. ಉದಯ್ ಕುಮಾರ್ ಅವರ ಜೊತೆಗೆ ಪತ್ನಿ ಮತ್ತು ಸಂಬಂಧಿ ಅವರೊಂದಿಗೆ ಇದ್ದರು. ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ.
ಒಂದು ವಾರದ ಹಿಂದೆಯಷ್ಟೇ ಕಾರನ್ನು ಖರೀದಿಸಲಾಗಿತ್ತು, ಕಾರು ಯಲಹಂಕದ ಕಡೆ ಹೋಗುತ್ತಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.