ಕರ್ತವ್ಯಕ್ಕೆ ಹಾಜರಾಗದ ಪಿಡಿಓ ಅಮಾನತ್ತು

ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮ ಪಂಚಾಯ್ತಿಗೆ ನಿಯುಕ್ತಿಗೊಂಡಿದ್ದ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವಿ.ಕೆ.ಗಣಾಚಾರಿ ಎಂಬುವವರು ಪಂಚಾಯ್ತಿ ಕರ್ತವ್ಯಕ್ಕೆ ಹಾಜರಾಗದ್ದರಿಂದ ಅಮಾನತ್ತು ಮಾಡಲಾಗಿದೆ. ಮೇಲಾಧಿಕಾರಿಗಳ ಆದೇಶ ಉಲ್ಲಂಘಿಸಿದ ಆರೋಪದ ಮೇಲೆ ಇದೀಗ ಪಿಡಿಓ ಗಣಾಚಾರಿ ಅವರನ್ನು ಕರ್ತವ್ಯದಿಂದ ಅಮಾನತ್ತುಗೊಳಿಸಿ ಜಿಲ್ಲಾ ಪಂಚಾಯ್ತಿ ಸಿಇಓ ಅವರು ಆದೇಶ ಹೊರಡಿಸಿದ್ದಾರೆ. ಚಿಕ್ಕಮಲ್ಲಿಗವಾಡ ಗ್ರಾಮ ಪಂಚಾಯ್ತಿ ಪಿಡಿಓ ಆಗಿ ವಿ.ಕೆ.ಗಣಾಚಾರಿ ಅವರನ್ನು ನೇಮಕ ಮಾಡಲಾಗಿತ್ತು. ಆದರೆ, ಅವರು ಅಧಿಕಾರ ಸ್ವೀಕರಿಸರಲಿಲ್ಲ. ಹೀಗಾಗಿ ಮೇಲಾಧಿಕಾರಿಗಳ ಆದೇಶ ಉಲ್ಲಂಘನೆ, ಕರ್ನಾಟಕ ನಾಗರಿಕ ಸೇವಾ ನಿಯಮಗಳ 1966ರ ನಿಯಮ 1ನ್ನು ಪೂರ್ಣ ಉಲ್ಲಂಘಿಸಿದ ಹಾಗೂ ಕರ್ತವ್ಯ ಲೋಪ ಆರೋಪದ ಮೇಲೆ ಗಣಾಚಾರಿ ಅವರನ್ನು ಕರ್ತವ್ಯದಿಂದ ಅಮಾನತ್ತುಗೊಳಿಸಲಾಗಿದೆ.