PSI' ನೇಮಕಾತಿಯಲ್ಲಿ ಅಕ್ರಮ ಪ್ರಕರಣ : ಅಮೃತ್ ಪಾಲ್ ಜಾಮೀನು ಅರ್ಜಿ ವಜಾ, ಜೈಲೇ ಗತಿ

ಬೆಂಗಳೂರು: ಅಕ್ರಮ ಪಿಎಸ್‌ಐ ನೇಮಕಾತಿ ಪರೀಕ್ಷೆ ( PSI Recruitment Scam ) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಧಿಕಾರಿ ಅಮೃತ್ ಪಾಲ್ ಜಾಮೀನು ಅರ್ಜಿ ವಜಾಗೊಂಡಿದೆ.
ಬೆಂಗಳೂರಿನ 24ನೇ ಸಿಸಿಹೆಚ್ ನ್ಯಾ.ಕೆ.ಲಕ್ಷ್ಮೀ ನಾರಾಯಣ ಭಟ್ ಅವರು ಅಮೃತ್ ಪಾಲ್ ಅವರ ಜಾಮೀನು ತಿರಸ್ಕರಿಸಿ ಆದೇಶ ಹೊರಡಿಸಿದ್ದಾರೆ.
545 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಮತ್ತು ಮಹಾಂತೇಶ್ ಪಾಟೀಲ್ಗೆ ಕಲಬುರಗಿ ಹೈಕೋರ್ಟ್ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ.ಅಂದಹಾಗೇ 545 ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಅಮೃತ್ ಪಾಲ್ ಅವರು ನೇಮಕಾತಿ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ಲಕ್ಷ ಲಕ್ಷ ಡೀಲ್ ಮೂಲಕ ಪರೀಕ್ಷೆಯಲ್ಲಿ ಅಕ್ರಮ ನಡೆಸಿರೋದಾಗಿ ತನಿಖೆಯಿಂದ ತಿಳಿದು ಬಂದಿತ್ತು. ಬ್ಲೂಟೂತ್ ಬಳಸಿ ಅಕ್ರಮ ವೆಸಗಿರೋದಾಗಿಯೂ ತಿಳಿದಿತ್ತು. ಈಗಾಗಗೇ ಈ ಪ್ರಕರಣದಲ್ಲಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.